Breaking News

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ

Spread the love

ಬೆಂಗಳೂರು, ಜನವರಿ 14: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ (Bengaluru) ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ.

ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ.

ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ.

ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ. ಸದ್ಯ, ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕ್​ನನ್ನು ಬಂಧಿಸಿದ್ದಾರೆ. ಇನ್ನು, ಅಭಿಷೇಕ್​ ಕುಮಾರ್​ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದನು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ