Breaking News

ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11): ಎಂ.ಜಿ.ಹಿರೇಮಠ

Spread the love

ಬೆಳಗಾವಿ:  ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11) ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ (ಡಿ.6) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಅಧಿಸೂಚನೆ ಹೊರಡಿಸಿದ ಬಳಿಕ ನಾಮಪತ್ರಗಳನ್ನು ಸ್ವೀಕಾರ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಮೊದಲನೇ ಹಂತಕ್ಕೆ ಡಿ.11; ಎರಡನೇ ಹಂತಕ್ಕೆ ಡಿ.16 ಕಡೆಯ ದಿನವಾಗಿರುತ್ತದೆ.
ನಾಮಪತ್ರಗಳ ಪರಿಶೀಲನೆ ಮೊದಲನೇ ಹಂತಕ್ಕೆ ಡಿ.12; ಎರಡನೇ ಹಂತಕ್ಕೆ ಡಿ.17 ಆಗಿರುತ್ತದೆ. ಉಮೇದುವಾರಿಕೆ ಹಿಂಪಡೆಯಲು ಮೊದಲ‌ ಹಂತ-ಡಿ.14 ಹಾಗೂ ಎರಡನೇ ಹಂತ-ಡಿ.19 ಕಡೆಯ ದಿನವಾಗಿರುತ್ತದೆ. ಮೊದಲ ಹಂತದ ಚುನಾವಣೆಗೆ ಡಿ.22 ಹಾಗೂ ಎರಡನೇ ಹಂತಕ್ಕೆ ಡಿ.27 ಮತದಾನ ನಡೆಯಲಿದ್ದು, ಡಿಸೆಂಬರ್ 31 ರಂದು ಮತ ಎಣಿಕೆ ನಡೆಯಲಿದೆ.
ಆಯಾ ತಾಲ್ಲೂಕುಗಳಲ್ಲಿ ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. 
ಚುನಾವಣೆಗೆ ಸಂಬಂಧಿಸಿದಂತೆ ಏನಾದರೂ ಅಕ್ರಮಗಳು ಕಂಡುಬಂದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗುವ ಕಂಟ್ರೋಲ್ ರೂಮ್, ಪೊಲೀಸ್ ಅಥವಾ ಅಬಕಾರಿ ಇಲಾಖೆಯ ಕಂಟ್ರೋಲ್ ರೂಮ್ ಗೆ ಸಾರ್ವಜನಿಕರು ಮಾಹಿತಿಯನ್ನು ನೀಡಬಹುದು ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದರು.
477 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ:
 ಡಿಸೆಂಬರ್ 2020 ರ ಅಂತ್ಯದವರೆಗೆ ಅವಧಿ ಮುಕ್ತಾಯವಾಗಲಿರುವ ಒಟ್ಟು ಜಿಲ್ಲೆಯ ಒಟ್ಟು 499 ಗ್ರಾಮ ಪಂಚಾಯಿತಿಗಳ ಪೈಕಿ 477 ಪಂಚಾಯಿತಿಗಳ 2738 ಕ್ಷೇತ್ರಗಳಿಗೆ ಹಾಗೂ ವಿವಿಧ ವರ್ಗವಾರು 8195  ಸದಸ್ಯ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು.
ಸಂಬಂಧಪಟ್ಟ ಗ್ರಾಮ ಪಂಚಾಯತಿಗಳಲ್ಲಿ ನಾಮಪತ್ರಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿರುತ್ತದೆ.
ಜಿಲ್ಲೆಯಲ್ಲಿ 25.24 ಲಕ್ಷ ಮತದಾರರು:
ಪ್ರಸಕ್ತ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 12,84,695 ಪುರುಷರು ಮತ್ತು 12,39,486 ಮಹಿಳೆಯರು ಸೇರಿದಂತೆ ಒಟ್ಟು 25,24,181 ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಚುನಾವಣಾ ಪ್ರಕ್ರಿಯೆಗೆ ಒಟ್ಟು 534 ಚುನಾವಣಾಧಿಕಾರಿಗಳು ಹಾಗೂ 576 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ.
ಡಿಸೆಂಬರ್ 31 ರವರೆಗೆ ನೀತಿಸಂಹಿತೆ:
ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನವೆಂಬರ್ 31 ರಿಂದ ಡಿಸೆಂಬರ್ 31 ರವರೆಗೆ ನೀತಿಸಂಹಿತೆ ಜಾರಿಯಲ್ಲಿರುವುದು. ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆಯ ಪ್ರದೇಶಗಳಿಗೆ ನೀತಿ ಸಂಹಿತೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಚುನಾವಣಾ ಅಕ್ರಮ ತಡೆಗೆ-ಬಿಗಿ ಬಂದೋಬಸ್ತ್:
ಹಣ-ಹೆಂಡ ಹಂಚಿಕೆಯ ಮೂಲಕ‌ ಮತದಾರರ ಮೇಲೆ ಪ್ರಭಾವ ಬೀರಬಹುದಾದ ಮತಗಟ್ಟೆಗಳನ್ನು ಗುರುತಿಸಿ ಅವುಗಳ ಆಧಾರದ ಮೇಲೆ ಭದ್ರತಾ ಮತ್ತಿತರ ವಿಚಕ್ಷಣಾ ತಂಡಗಳನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
ಅಬಕಾರಿ ಮತ್ತು ಪೊಲೀಸ್ ಇಲಾಖೆಯ ವತಿಯಿಂದ ತಾಲ್ಲೂಕುವಾರು ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗುವುದು. ಉಳಿದಂತೆ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುವುದು ಎಂದರು.
ಅಂತರ್ ರಾಜ್ಯ, ಅಂತರ್ ಜಿಲ್ಲೆ ಹಾಗೂ ಅಂತರ್ ತಾಲ್ಲೂಕು ಮಾದರಿಯಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗುವುದು.
ಗಡಿ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ನೆರೆಯ ರಾಜ್ಯದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗುವುದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ವಿವರಿಸಿದರು.
ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ಅಶಾಒಕ ದುಡಗುಂಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ

Spread the love ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ