Breaking News

ಕಾಗೇರಿ ಮನೆಗೆ ನುಗ್ಗಿದ ಚಿರತೆ,

Spread the love

ಕಾರವಾರ (ಜನವರಿ.14): ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ ನುಗ್ಗಿರುವ ಘಟನೆ ನಡೆದಿದೆ.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿರುವಾಗಲೇ ಈ ಘಟನೆ ನಡೆದಿದೆ. ನಿನ್ನೆ (ಜನವರಿ 13) ತಡರಾತ್ರಿ ವೇಳೆ ಆಹಾರ ಅರಸಿ ಶಿರಸಿ ತಾಲೂಕಿನ ಕಾಗೇರಿ ಗ್ರಾಮದಲ್ಲಿರುವ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದ್ದು,

ಮನೆಯಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಅಟ್ಟಾಡಿಸಿಕೊಂಡು ಹೋಗಿದೆ. ತೋಟದ ಭಾಗದಿಂದ ಮನೆಯ ಶ್ವಾನವನ್ನು ಚಿರತೆ ಅಟ್ಟಿಸಿಕೊಂಡು ಬಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನು ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಕಾಗೇರಿಯವರ ಮನೆಯ ಸಾಕು ನಾಯಿ ಯಶಸ್ವಿಯಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ