ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಬ್ಲ್ಯಾಕ್ಮೇಲ್ ಮಾಡಿ, ಮದುವೆಯನ್ನೂ ಮಾಡಿಕೊಂಡು ಚಿತ್ರಹಿಂಸೆ ನೀಡಿದ್ದಾನೆ. ಆರೋಪಿಯು ಸಾಮಾಜಿಕ ಮಾಧ್ಯಮದಲ್ಲಿ ಮೊದಲು ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ಬಲವಂತದಿಂದ ಮದುವೆಯಾಗಿ ಆಕೆಯ ದೇಹವನ್ನು ಬಿಸಿ ಬಾಣಲೆ ಮತ್ತು ಸಿಗರೇಟ್ ತುಂಡುಗಳನ್ನು ಸುಟ್ಟುಹಾಕಿದ್ದಾನೆ.
ಆರೋಪಿಯ ತಾಯಿ ಸೇರಿದಂತೆ ಇತರ ಐವರು ಕುಟುಂಬಸ್ಥರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಆತನ ವಿರುದ್ಧ ದೂರು ದಾಖಲಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಉಲ್ಹಾಸ್ನಗರದಲ್ಲಿ ವಾಸಿಸುತ್ತಿದ್ದ ಆರೋಪಿ 2021ರಲ್ಲಿ ಫೇಸ್ಬುಕ್ನಲ್ಲಿ ಆ ಮಹಿಳೆ ಸ್ನೇಹ ಬೆಳೆಸಿದ್ದ. ನಂತರ ಆ ವ್ಯಕ್ತಿ ಆಕೆಯನ್ನು ಲಾಡ್ಜ್ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾನೆತನ್ನ ದುರಂತ ಅನುಭವವನ್ನು ಆ ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ. ತನ್ನ ಗಂಡ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಷ್ಟೇ ಅಲ್ಲದೆ ಅದನ್ನು ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು 27 ವರ್ಷದ ಮಹಿಳೆ ಆರೋಪಿಸಿದ್ದಾರೆ. ನಂತರ ಆ ವ್ಯಕ್ತಿ ಆ ವಿಡಿಯೋ ತೋರಿಸಿ ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ.
Laxmi News 24×7