Breaking News

45 ರೌಡಿಶೀಟರ್​ಗಳ ಗಡಿಪಾರು ಮಾಡಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ

Spread the love

ಹುಬ್ಬಳ್ಳಿ: ಅವಳಿ- ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 45 ಮಂದಿ ರೌಡಿಶೀಟರ್‌ಗಳಿಗೆ ಗಡಿಪಾರು ಮಾಡಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೌಡಿಶೀಟರ್‌ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೊಲೆ, ಸುಲಿಗೆ, ಮಾದಕ ವಸ್ತು ಮಾರಾಟ ಹಾಗೂ ಸೇವನೆ, ಮಟ್ಕಾ, ಭೂ ಮಾಫಿಯಾ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್​ಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳಿದೆ. ಈ ನಿಟ್ಟಿನಲ್ಲಿ ಶಾಂತಿ ನೆಲೆಸಲು ಕ್ರಮ ಜರುಗಿಸಲಾಗಿದೆ. ಆರೋಪಿಗಳನ್ನು ಬೀದರ್, ಯಾದಗಿರಿ, ದಕ್ಷಿಣ ಕನ್ನಡ, ಚಾಮರಾಜನಗರಗಳಿಗೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಇವರ ಚಟುವಟಿಕೆಗಳ ಮೇಲೆ ನಿಕಟ ನಿಗಾ ಇರಿಸಲಾಗಿದೆ ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ