Breaking News

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಬರೋಬ್ಬರಿ 23 ಕೋಟಿ ರೂ ಮೌಲ್ಯದ ಗಾಂಜಾ ವಶ

Spread the love

ಬೆಂಗಳೂರು, ಜನವರಿ 16: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ತಂದಿದ್ದ 23 ಕೋಟಿ ರೂ. ಮೌಲ್ಯದ ಗಾಂಜಾವನ್ನು (ganja) ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬ್ಯಾಂಕಾಕ್​ನಿಂದ ಅಕ್ರಮವಾಗಿ 23 ಕೆಜಿ ಗಾಂಜಾ ತಂದಿದ್ದ ಮೂವರನ್ನು ಬಂಧಿಸಿದ್ದು, ಎನ್​ಡಿಪಿಎಸ್​ ಖಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ.ಬಂಧಿತ ಮೂವರು ಬ್ಯಾಂಕಾಕ್​ನಿಂದ ಅಕ್ರಮವಾಗಿ 23 ಕೆಜಿಯ ಹೈಡ್ರೋಪೋನಿಕ್ಸ್, ಮೈರವಾನ್ ಮತ್ತು ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾವನ್ನು ಪ್ರತ್ಯೇಕ ಕವರ್ಗಳಲ್ಲಿ  ಪ್ಯಾಕಿಂಗ್ ಮಾಡಿಕೊಂಡು ಲಗೇಜ್ ಬ್ಯಾಗ್​ನಲ್ಲಿಟ್ಟುಕೊಂಡು ಕೆಐಎಬಿಗೆ ಬಂದಿದ್ದರು.

ಈ ವೇಳೆ ಕೆಂಪೇಗೌಡ ಏರ್​ಪೋರ್ಟ್​ ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲನೆ ವೇಳೆ ಗಾಂಜಾ ಸಮೇತ ಮೂವರನ್ನು ಬಂಧಿಸಿದ್ದಾರೆ. ಇನ್ನು ಹೈಡ್ರೋಪೋನಿಕ್ ಗಾಂಜಾ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಬಾಳುತ್ತದೆ ಎನ್ನಲಾಗಿದೆ.

ಅಂತಾರಾಜ್ಯ ಬೈಕ್​​ ಕಳ್ಳನ ಬಂಧನ: 5,15,000 ರೂ. ಮೌಲ್ಯದ 16 ಬೈಕ್ ಜಪ್ತಿ 

ಹಾವೇರಿಯಲ್ಲಿ ಅಂತಾರಾಜ್ಯ ಬೈಕ್​​ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. 5,15,000 ರೂ. ಮೌಲ್ಯದ 16 ಬೈಕ್ ಜಪ್ತಿ ಮಾಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಕವಲೆತ್ತು ಗ್ರಾಮದ ನಿವಾಸಿ ಅಪ್ಪು‌ ನಾಗೇನಹಳ್ಳಿ(35) ಬಂಧಿತ ಆರೋಪಿ.

ಆರೋಪಿ ಜನಸಂದಣಿ ಪ್ರದೇಶದಲ್ಲಿ ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್​​ಗಳನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಹೆಚ್ಚುವರಿ ಎಸ್​​ಪಿ ಎಲ್​​ವೈ ಶೀರಕೋಳ ಮತ್ತು ಸಂತೋಷ ಪವಾರ ನೇತೃತ್ವದಲ್ಲಿ ಬೈಕ್ ಕಳ್ಳನನ್ನು ಬಂಧಿಸಲಾಗಿದ್ದು, ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ