Breaking News

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್

Spread the love

ಬಳ್ಳಾರಿ, ಜನವರಿ 16: ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಂಜುನಾಥ್ (26) ಮೇಲೆ ಗುರುವಾರ ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು ಎನ್ನಲಾಗಿದೆ.ಬಳ್ಳಾರಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್

ಸೋಮವಾರ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ಮೂರು ತಂಡ ರಚಿಸಿದ್ದರು. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಪಂಚಾನಾಮೆಗೆ ಹೋದಾಗ ಆತ, ಹೆಡ್ ಕಾನ್ಸ್​​​ಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಪಿಎಸ್​ಐ ಡಾಕೇಶ್ ಆರೋಪಿಯ ಬಲಗಾಲಿಗೆ ಮೇಲೆ ಪೈರಿಂಗ್ ಮಾಡಿದ್ದರು. ಸದ್ಯ ಆರೋಪಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ