Breaking News

ಓಂಶಕ್ತಿ ಮಾಲಾಧಾರಿಗಳಿಗೆ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ

Spread the love

ಚಿತ್ರದುರ್ಗದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಬೆಂಜ್ ಕಾರು ರಸ್ತೆ ದಾಟುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದಲ್ಲಿ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಅಪಘಾತಕ್ಕೀಡಾದ ಕಾರನ್ನು ಜಪ್ತಿ ಮಾಡಲಾಗಿದೆ.

ಶಾಸಕ ಕೆ.ಸಿ.ವೀರೇಂದ್ರ (kc veerendra) ಪಪ್ಪಿ ಕಾರು ಡಿಕ್ಕಿ ಹೊಡೆ ಪರಿಣಾಮ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಾಲಕನ ನಿರ್ಲಕ್ಷ್ಯ, ಅಜಾಗರೂಕತೆ ಚಾಲನೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ಅಪಘಾತಕ್ಕೀಡಾದ KA 55, P 0003 ಸಂಖ್ಯೆ ಬೆಂಜ್ ಕಾರನ್ನು ಜಪ್ತಿ ಮಾಡಲಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಅಪಘಾತದ ದೃಶ್ಯ ಸಿಸಿಕ್ಯಾಮಾರದಲ್ಲಿ ಸೆರೆ ಆಗಿದೆ. ಬೆಳಿಗ್ಗೆ 9:25ರ ಸುಮಾರಿಗೆ ಒಟ್ಟು ಮೂರು ಕಾರುಗಳ ಮುಖಾಂತರ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ