Breaking News

ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

Spread the love

ಬೀದರ್, ಜನವರಿ 16: ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ.

ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ಬೀದರ್ ಶಿವಾಜಿ ಚೌಕ್​ನಲ್ಲಿ ನಡೆದಿದ್ದೇನು?

ಅದು ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್. ಜನ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಹಾಡಹಗಲೇ, ನೋಡ ನೋಡುತ್ತಿದ್ದಂತೆಯೇ ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.

ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ಎಂದಿನಂತೆ ಇವತ್ತು ಕೂಡ ಎಟಿಎಂಗಳಿಗೆ ಹಣ ಹಾಕಲು ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್‌ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ