Breaking News

ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ

Spread the love

ಮೈಸೂರು, ಜನವರಿ 16: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಆಗಂತುಕರು ಹಾಲು ತುಂಬಿದ ಮೂರು ಹಸುಗಳ ಕೆಚ್ಚಲು ಕೊಯ್ಯುವ ಮೂಲಕ ಅಟ್ಟಹಾಸ ಮೆರೆದಿದ್ದರು. ಈ ಕ್ರೌರ್ಯಕ್ಕೆ ಕರ್ನಾಟಕದಲ್ಲಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿತ್ತು. ಸದ್ಯ ಈ ಘಟನೆ ಮಾಸುವ ಮುನ್ನವೇ ಇಂತಹದೊಂದು ಘಟನೆ ಮೈಸೂರಿನಲ್ಲಿ (mysuru) ನಡೆದಿದ್ದು, ಮಾರಕಾಸ್ತ್ರದಿಂದ ಕರುವಿನ ಬಾಲವನ್ನು ದುಷ್ಕರ್ಮಿಗಳು ತುಂಡರಿಸಿದ್ದಾರೆಮಾರಕಾಸ್ತ್ರದಿಂದ ಹರಕೆಗಾಗಿ ಬಿಟ್ಟ ಕರುವಿನ ಬಾಲವನ್ನು ದುಷ್ಕರ್ಮಿಗಳು ತುಂಡರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಘಟನೆ ನಡೆದಿದೆ. ಸದ್ಯ ದಾಳಿ ಮಾಡಿದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ