Breaking News

ಬೆಳಗಾವಿಯ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ‌್ಯಾಲಿ ಹೊಸ ಕ್ರಾಂತಿಗೆ ಸೂತ್ರ

Spread the love

ಬೆಳಗಾವಿ: ಕಾಂಗ್ರೆಸ್ ನೋಟಿಸ್ ನೀಡಿದೆ ಎಂಬ ವದಂತಿಗಳನ್ನೆಲ್ಲ ಯಾರೂ ಹಬ್ಬಿಸುತ್ತಿದ್ದಾರೆ ನನಗೆ ಗೊತ್ತಿಲ್ಲ. ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸ ಇಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ‌ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸ್ಪಷ್ಟಪಡಿಸಿದರು.

ಬೆಳಗಾವಿ ಸಾಂಬ್ರಾ ವಿಮಾನ‌ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಸುರ್ಜೇವಾಲ ಅವರು ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ವದಂತಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಯಾವ ಸಚಿವರಿಗೂ ನೋಟಿಸ್ ನೀಡಲು ಕಾರಣವಿಲ್ಲ. ಇವೆಲ್ಲ ಕೇವಲ ವದಂತಿ ಎಂದು ಸಷ್ಪಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಿದ್ದರೆ, ಅವರು ಇಲ್ಲಿ ಯಾಕೆ ಬರುತ್ತಿದ್ದರು ಎಂದು ಮರುಪ್ರಶ್ನಿಸುವ ಮೂಲಕ ಅದಕ್ಕೂ ಸುರ್ಜೇವಾಲ ತೆರೆ ಎಳೆದರು.

ಬೆಳಗಾವಿಯ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ‌್ಯಾಲಿ ಹೊಸ ಕ್ರಾಂತಿಗೆ ಸೂತ್ರ: 100 ವರ್ಷಗಳ ಮೊದಲು ಮಹಾತ್ಮ ಗಾಂಧಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾದಾಗ ಆಂಗ್ಲರ ವಿರುದ್ಧ ಸ್ವಾತಂತ್ರ್ಯ ಸಿಕ್ಕಿತ್ತು. ಈಗ 100 ವರ್ಷಗಳ ಮೇಲೆ ಭೇದಭಾವ, ಸಂವಿಧಾನ ಮೇಲಿನ ದಾಳಿಯ ವಿರುದ್ಧ ಹೊಸ ಕ್ರಾಂತಿಗೆ ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಸೂತ್ರವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ‌ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ