Breaking News

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ

Spread the love

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೊತೆಗೆ ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ಧತಿ ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರಿಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು. ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರಿಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025ನ್ನು ಅಂತಿಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ‌ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಒಬ್ಬ ಅಧಿಕಾರಿ/ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ ಹಾಗೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಸಚಿವ ತಿಮ್ಮಾಪುರ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ