Breaking News

ಬೆಳ್ಳಂಬೆಳಿಗ್ಗೆಸೈಫ್ ಅಲಿ ಖಾನ್ ಆರೋಪಿಯೊಬ್ಬನ ಬಂಧನ

Spread the love

ಸೈಫ್ ಅಲಿ ಖಾನ್ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಬೆಳ್ಳಂಬೆಳಿಗ್ಗೆ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಹೋಟೆಲ್ ಒಂದರಲ್ಲಿ ವೇಯಿಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ್ ದಾಸ್ ಹೆಸರಿನ ವ್ಯಕ್ತಿಯನ್ನು ಭಾನುವಾರ (ಜನವರಿ 19) ಬೆಳ್ಳಂಬೆಳಿಗ್ಗೆ ಪೊಲೀಸರು ಬಂಧಿಸಿರುವುದಾಗಿ ಎಎನ್ಐ ವರದಿ ಮಾಡಿದೆ. ಆರೋಪಿಯ ಚಿತ್ರವೂ ಬಹಿರಂಗಗೊಂಡಿದೆ.

ಆದರೆ ಈತ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಆದರೆ ದಾಳಿ ಕೋರನಿಗೆ ಸಹಾಯ ಮಾಡಿದ ಹಾಗೂ ದಾಳಿಕೋರನ ಜೊತೆಗೆ ಸಂಪರ್ಕದಲ್ಲಿ ಇದ್ದ ವ್ಯಕ್ತಿ ಈತ ಎನ್ನಲಾಗಿದೆ.ಸೈಫ್ ಅಲಿ ಖಾನ್​ ಮನೆಯಿಂದ 35 ಕಿ.ಮೀ ದೂರದಲ್ಲಿರುವ ಕಾಸರ್ವಾದಲಿಯ ಹೀರಾನಂದಾನಿ ಎಸ್ಟೇಟ್ ಬಳಿಯಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಆರೋಪಿ ವಿಜಯ್ ದಾಸ್ ಅನ್ನು ಬಂಧಿಸಲಾಗಿದೆ.

ಸಿಕ್ಕಿ ಬೀಳುವ ಭಯದಲ್ಲಿ ಈತ ಹೆಸರು ಬದಲಾವಣೆ ಮಾಡಿಕೊಂಡಿದ್ದ ಹಾಗೂ ಮುಂಬೈನಿಂದ ಪರಾರಿಯಾಗುವ ಯತ್ನದಲ್ಲಿದ್ದ ಎನ್ನಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್​ಘಡದ ರೈಲ್ವೆ ನಿಲ್ದಾಣದಲ್ಲಿ ಆಕಾಶ ಕೈಲಾಶ್ ಕನ್ನೋಜಿಯಾ ಹೆಸರಿನ ಆರೋಪಿಯನ್ನು ಸಹ ಬಂಧಿಸಲಾಗಿದೆ.

ಈಗ ಮುಂಬೈನಲ್ಲಿ ಒಬ್ಬಾತನ ಬಂಧನ ಆಗಿದೆ.ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶದಲ್ಲಿಯೂ ಆರೋಪಿಯೊಬ್ಬನನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು.

ಆದರೆ ಮಧ್ಯ ಪ್ರದೇಶದಲ್ಲಿ ವಶಕ್ಕೆ ಪಡೆದ ವ್ಯಕ್ತಿಯನ್ನು ಬಂಧಿಸಲಾಗಿಲ್ಲ ಬದಲಿಗೆ ವಶಕ್ಕೆ ಪಡೆದು ವಿಚಾರಣೆಯನ್ನಷ್ಟೆ ಮಾಡಲಾಗಿದೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ “ಉತ್ತಮ ವಿದ್ಯಾರ್ಥಿ ಗ್ರಾಮ ಪುರಸ್ಕಾರ”

Spread the love ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ “ಉತ್ತಮ ವಿದ್ಯಾರ್ಥಿ ಗ್ರಾಮ ಪುರಸ್ಕಾರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ