Breaking News

ಕೆಲವೇ ದಿನದಲ್ಲಿ ಬಸ್ ಪಾಸ್: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ.

Spread the love

ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಾಧಾರಿತ ಸುದ್ದಿ ಇಂದಿನ ಅಗತ್ಯ. ಕಲ್ಪಿತ ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ, ಸಮಾಜದಲ್ಲಿರುವ ಮೇಲು-ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.

ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ: ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆಯನ್ನು ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ. ಪತ್ರಕರ್ತರ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಮೌಢ್ಯದ ಸುದ್ದಿ, ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ. ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ ಸವಾಲು ಎರಡೂ ಆಗಿದೆ ಎಂದರು.

ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದು ಸಲಹೆ ನೀಡಿದರು.

ಕೆಲವೇ ದಿನದಲ್ಲಿ ಬಸ್ ಪಾಸ್: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ. ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ