Breaking News

7.20 ಕೋಟಿ ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳುಗಳು ಪತ್ತೆ

Spread the love

ಬಳ್ಳಾರಿ: 7.20 ಕೋಟಿ ರೂ.ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾದ ಘಟನೆ ಬಳ್ಳಾರಿಯ ಕೆಎಸ್‌ಡಬ್ಲ್ಯೂಸಿ ಗೋಡಾನ್​ನಲ್ಲಿ ನಡೆದಿದೆ. ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನಿನ್ನೆ (ಶುಕ್ರವಾರ) ಕೆಎಸ್‌ಡಬ್ಲ್ಯೂಸಿಯ ಯುನಿಟ್ -2 ರ ಗೋದಾಮಿಗೆ ಭೇಟಿ ನೀಡಿದಾಗ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾಗಿದೆ. ತಲಾ 50 ಕೆಜಿ ತೂಕದ 48,000 ಚೀಲ ಜೋಳದಲ್ಲಿ ಹುಳುಗಳು ಕಂಡುಬಂದಿವೆ.WORMS FOUND IN JOWAR BAGS

ನ್ಯಾಯಮೂರ್ತಿ ವೀರಪ್ಪ, ಉಪ ನೋಂದಣಾಧಿಕಾರಿ ಅರವಿಂದ್ ಎನ್.ವಿ ಪ್ರಶ್ನಿಸಿದಾಗ, ಕೆಎಸ್‌ಡಬ್ಲ್ಯುಸಿಯ ಬಳ್ಳಾರಿ ಘಟಕದ ವ್ಯವಸ್ಥಾಪಕಿ ಶರಾವತಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಸಕಿನಾ ಅವರು 2024 ಮಾರ್ಚ್ 29 ರಂದು ಭಾರತೀಯ ಆಹಾರ ನಿಗಮದಿಂದ ಜೋಳ ಸೇವನೆಗೆ ಯೋಗ್ಯವಾಗಿದೆ ಎಂದು ಪ್ರಮಾಣಪತ್ರವನ್ನು ಪಡೆದಿದ್ದೇವೆ, ಸರ್ಕಾರದ ಆದೇಶ ಪಾಲನೆ ಮಾಡಿದ್ದೇವೆ ಎಂದು ಉತ್ತರಿಸಿದ್ದಾರೆ.

ಜೋಳದ ಚೀಲದಲ್ಲಿ ಹುಳುಗಳನ್ನು ಕಂಡ ಉಪ ಲೋಕಾಯುಕ್ತರು, ಇಂತಹ ಜೋಳ ಪ್ರಾಣಿಗಳು ಸಹ ತಿನ್ನಲು ಯೋಗ್ಯವಲ್ಲ. ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ 48,000 ಚೀಲ ಜೋಳ ವ್ಯರ್ಥವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಮೂರ್ತಿ ಬಿ. ವೀರಪ್ಪ ಅವರ ಮಾತಿನಿಂದ ಅಸಮಾಧಾನಗೊಂಡ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಸಕಿನಾ, ಗೋದಾಮಿಗೆ ಭೇಟಿ ನೀಡಿದ್ದನ್ನು ದೃಢೀಕರಿಸಲು ಜಿಪಿಎಸ್‌ಗೆ ಲಿಂಕ್ ಮಾಡುವ ಫೋಟೋವನ್ನು ಒದಗಿಸುವಂತೆ ಕೇಳಿದರು.


Spread the love

About Laxminews 24x7

Check Also

ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ…

Spread the love ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ… ಸಂಚರಿಸಲು ಪರದಾಡುತ್ತಿರುವ ವಾಹನ ಸವಾರರು…ಸಮಸ್ಯೆ ಬಗೆಹರಿಸಿದ್ದರೇ ಪ್ರತಿಭಟನೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ