Breaking News

ಬಸನಗೌಡ ಯತ್ನಾಳ್​ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಟಾಂಗ್

Spread the love

ರಾಯಚೂರು: ಭಾರತೀಯ ಜತನಾ ಪಾರ್ಟಿ ಆಂತರಿಕ ಪ್ರಜಾಪ್ರಭುತ್ವ ಇರುವಂತಹ ರಾಜಕೀಯ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಮಾನವಿ ಪಟ್ಟಣದಲ್ಲಿ ಕೆಎಸ್‌ಎನ್ ಸೇವಾವತಿಯಿಂದ ಆಯೋಜಿಸಿದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಶಾಸಕ ಬಸನಗೌಡ ಯತ್ನಾಳ್​ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಪಕ್ಷದ ಹಿರಿಯರು ಆಶೀರ್ವಾದ ಮಾಡಿ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಿರ್ವಹಿಸಿಕೊಂಡು ಬಂದಿದ್ದೇನೆ. ಹಿರಿಯರು ಮತ್ತೊಮ್ಮೆ ಆಶೀರ್ವಾದ ಮಾಡಿ ಪಕ್ಷ ಮುನ್ನಡೆಸಲು ಅವಕಾಶ ಕೊಡುತ್ತಾರೆ ಎನ್ನುವ ಸಂಪೂರ್ಣ ವಿಶ್ವಾಸ ನನಗಿದೆ. ಮತ್ತೊಮ್ಮೆ ಎಲ್ಲರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡುವ ಅವಕಾಶ ಸಿಗುತ್ತೆ ಎನ್ನುವ ವಿಶ್ವಾಸವಿದೆ ಎಂದರು.ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಆರೋಪ ಮತ್ತು ರಾಜೀನಾಮೆಗೆ ಆಗ್ರಹಿಸಿರುವ ಪ್ರಶ್ನೆಗೆ ಉತ್ತರಿಸಿ, ಯತ್ನಾಳ್​ ಅವರಿಗೆ ಎಲ್ಲ ಒಳ್ಳೆಯದಾಗಲಿ. ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದು ಹಾರೈಸಿ ಕೈಮುಗಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ