ಯಾದಗಿರಿ, : ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ (Sharanagouda Kandakura) ದೌರ್ಜನ್ಯ ಹಾಗೂ ಮಾನಸಿಕ ಕಿರುಕುಳ ತಡೆದುಕೊಳ್ಳಲಾಗದೆ ದಯಾಮರಣ ಕರಣಿಸುವಂತೆ ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದ ಯುವಕ ಬೀರಲಿಂಗಪ್ಪ ಎಂಬುವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

“ಗುರುಮಿಠಕಲ್ ಮತಕೇತ್ರದ ಶಾಸಕ ಶರಣಗೌಡ ಕಂದಕೂರ ನನ್ನ ಊರಿನ ರಾಜಶೇಖರ ಗೌಡ ಮತ್ತು ಮಲ್ಲಿಕಾರ್ಜುನ ಮಾಲಿಪಾಟೀಲ್ ಅವರಿಂದ ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರಿಂದ ಸೈದಾಪೂರ ಪೊಲೀಸ್ ಠಾಣೆಯಲ್ಲಿ ನನ್ನ ಮೇಲೆ ಸುಳ್ಳು ದೂರು ನೀಡಿದ್ದಾರೆ. ನಾನು ವಾರ್ತಾ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದು, ನನ್ನನ್ನು ಕೆಲಸದಿಂದ ತೆಗೆಯದಿದ್ದರೆ ನಿಮ್ಮ ಆಫೀಸ್ ಮುಂದೆ ಪ್ರತಿಭಟನೆ ಮಾಡುತ್ತೇನೆ ಹಾಗೂ ವಿಧಾನಸೌಧದಲ್ಲಿ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ, ನನ್ನ ಪವರ್ ಏನೆಂದು ತೋರಿಸುತ್ತೇನೆ ಎಂದು ವಾರ್ತಾ ಇಲಾಖೆ ಅಧಿಕಾರಿಗಳಿಗೆ ಧಮ್ಮಿ ಹಾಕಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳ ಮುಖಾಂತರ ನನ್ನನ್ನು ಕೆಲಸದಿಂದ ತೆಗೆಸಲು ಹುನ್ನಾರ ನಡೆಸಿದ್ದಾರೆ.
“ನಮ್ಮ ಊರಿನ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಬಿಡುಗಡೆಯಾದ 3 ಲಕ್ಷದ 98 ಸಾವಿರ ರೂಪಾಯಿಗಳ ಅನುದಾನಕ್ಕೆ ತಮ್ಮ ಕಾರ್ಯಕರ್ತರಿಂದ ಗ್ರಾಮಸ್ಥರ ಪೋರ್ಜರಿ ಸಹಿ ಮಾಡಿಸಿ ಬಿಲ್ ಮಾಡದಂತೆ ನಿರ್ಮೀತಿ ಕೇಂದ್ರದ ಅಧಿಕಾರಿಗಳಿಗೆ ತಡೆ ಹಿಡಿದಿದ್ದಾರೆ. ದೇವಸ್ಥಾನ ನಿರ್ಮಾಣಕ್ಕಾಗಿ ಸಾಲ ಮಾಡಿದ್ದೇನೆ. ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿ ಇರುವಾಗ ಉದ್ದೇಶ ಪೂರ್ವಕವಾಗಿ ಕಾಮಗಾರಿ ಬದಲಾವಣೆ, ಮಾಡಿ ಅನುದಾನ ಬೇರೆ ಊರಿಗೆ ಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ಮೀತಿ ಕೇಂದ್ರದವರಿಗೆ ಶಾಸಕರು ಪತ್ರ ಬರೆದಿದ್ದಾರೆ.
Laxmi News 24×7