Breaking News

ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಅಭಿನಂದನೆ

Spread the love

ಬೆಳಗಾವಿ : ಐದನೇ ಬಾರಿಗೆ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟ್ರೋಫಿಯನ್ನು ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

“ಗುಜರಾತಿನ ವಡೋದರ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅಂತಿಮ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ತಂಡ 36 ರನ್ ಗಳ ಅಂತರದಲ್ಲಿ ವಿದರ್ಭ ತಂಡವನ್ನು ಮಣಿಸಿರುವುದು ಸಂತೋಷದ ಸಂಗತಿ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸಂಘಟಿತ ಪ್ರದರ್ಶನದೊಂದಿಗೆ ಕರ್ನಾಟಕ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ” ಎಂದು ಸಂತೋಷ ವ್ಯಕ್ತಪಡಿಸಿದರು.

“ಟೂರ್ನಿಯಲ್ಲಿ ಆಕರ್ಷಕ ಪ್ರದರ್ಶನ ನೀಡಿರುವ ನಾಯಕ ಮಯಾಂಕ್ ಅಗರ್ವಾಲ್ ಸೇರಿದಂತೆ ತಂಡದ ಪ್ರತಿಯೊಬ್ಬ ಆಟಗಾರರು ಹಾಗೂ ತರಬೇತು ತಂಡದವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ