Breaking News

ಮೆಟ್ರೋ ಟಿಕೆಟ್ ದರ ಏರಿಕೆ ಮುಂದಿನ ವಾರದಿಂದ ಬಹುತೇಕ ಖಚಿತ

Spread the love

ಬೆಂಗಳೂರು, ಜನವರಿ 20: ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳಕ್ಕೆ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಈಗಾಗಲೇ ನಿರ್ಧರಿಸಿದೆ ಎನ್ನಲಾಗಿದ್ದು, ಮುಂದಿನ ವಾರದಿಂದ ದರ ಏರಿಕೆ ಜಾರಿಗೆ ಬರುವುದು ಬಹುತೇಕ ಖಚಿತವಾಗಿದೆ. ಮೆಟ್ರೋ ಟಿಕೆಟ್ ದರವನ್ನು ಶೇ 43ರಷ್ಟು ಹೆಚ್ಚಿಸಲು ಚಿಂತನೆ ನಡೆಸಿರುವುದಾಗಿ ಬಿಎಂಆರ್‌ಸಿಎಲ್‌ ಈಗಾಗಲೇ ಪ್ರಕಟಿಸಿದ್ದು, ಪ್ರಯಾಣಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದರೆ, ದರ ಹೆಚ್ಚಳ ಸಂಬಂಧ ಈವರೆಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಮೆಟ್ರೋ ಟಿಕೆಟ್ ದರ ಏರಿಕೆ ಮುಂದಿನ ವಾರದಿಂದ ಬಹುತೇಕ ಖಚಿತ

ಟಿಕೆಟ್ ದರ ಹೆಚ್ಚಳದ ಸಂಬಂದ ಬಿಎಂಆರ್‌ಸಿಎಲ್‌ ಶುಕ್ರವಾರ ಸಭೆ ನಡೆಸಿತ್ತು. ನಂತರ, ದರ ಹೆಚ್ಚಳಕ್ಕೆ ತೀರ್ಮಾನಿಸಿರುವುದಾಗಿ ಶನಿವಾರ ಹೇಳಿತ್ತು. ಆದರೆ, ಅಧಿಕೃತ ಆದೇಶ ಹೊರಡಿಸಿಲ್ಲ.

ಏತನ್ಮಧ್ಯೆ, ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ ಈವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಮುಂದಿನ ವಾರದಲ್ಲಿ ನಿರ್ಧಾರ ಪ್ರಕಟವಾಗಬಹುದು ಮತ್ತು ತಕ್ಷಣದಿಂದಲೇ ಜಾರಿಗೆ ಬರಬಹುದು. ಶೇ 40 ರಿಂದ 43 ರಷ್ಟು ದರ ಹೆಚ್ಚಳಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತ ವಾಗಿದ್ದರಿಂದ ಹಚ್ಚಳದ ಪ್ರಮಾಣವನ್ನು ಪರಿಷ್ಕರಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ಮೂಲಗಳು ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ತಿಳಿಸಿದೆ. ಜತೆಗೆ, ದರ ಹೆಚ್ಚಳವನ್ನು ಬಿಎಂಆರ್‌ಸಿಎಲ್‌ ಮೂಲಗಳು ಸಮರ್ಥಿಸಿಕೊಂಡಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ