Breaking News

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಬೆಂಗಳೂರು : ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.
*ಹಣ ದುರುಪಯೋಗದ ಪ್ರಶ್ನೆ ಇಲ್ಲ*
ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.
*ತಪ್ಪಿತಸ್ಥರ ವಿರುದ್ಧ ಕ್ರಮ*
ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
*ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತ್ಯ ಕ್ರಮ*
ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ