ಬೆಂಗಳೂರು : ಕೃಷಿ ಇಲಾಖೆಯ ವತಿಯಿಂದ ಜನವರಿ 23 ರಿಂದ 25ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ, ಸಾವಯವ ಮತ್ತು ಸಿರಿಧಾನ್ಯ ಮೇಳ -2025ನ್ನು ಆಯೋಜಿಸಲಾಗಿದೆ.
ಖಾಸಗಿ ಹೋಟೆಲ್ನಲ್ಲಿ ಇಂದು ಸಂಜೆ ಮಾಧ್ಯಮಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಜನವರಿ 23ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಮೈದಾನ ತ್ರಿಪುರನಿವಾಸಿನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಳದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದರು.
ಸರ್ಕಾರವು ಸುಮಾರು ಎರಡು ದಶಕಗಳಿಂದ ಸಾವಯವ ಕೃಷಿಯನ್ನು ಉತ್ತಮ ಪರ್ಯಾಯ ಪದ್ಧತಿಯಾಗಿ ಉತ್ತೇಜಿಸಲು ಪ್ರಾರಂಭಿಸಿದೆ. 2017ರಲ್ಲಿ ಆಯೋಜಿಸಿದ್ದ ಮೊದಲ ಆವೃತ್ತಿಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಮೂಲಕ ರಾಜ್ಯವು ಸಾವಯವ ಮತ್ತು ಸಿರಿಧಾನ್ಯಗಳ ಪ್ರಚಾರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ.
ಈ ಮೇಳವು ರೈತರು, ರೈತ ಗುಂಪುಗಳು, ದೇಶೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳು ಸಾವಯವ ಮತ್ತು ಸಿರಿಧಾನ್ಯ ವಲಯದ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳನ್ನು ಒಗ್ಗೂಡಿಸುವುದರ ಜೊತೆಗೆ ಹೊಸ ಹೊಸ ಅವಕಾಶಗಳನ್ನು ಅನ್ವೇಷಿಸುವ ಮತ್ತು ಪರಿಣಾಮಕಾರಿಯಾಗಿ ಮಾರುಕಟ್ಟೆ ಸಂಪರ್ಕಗಳನ್ನು ಕಲ್ಪಿಸುವ ವೇದಿಕೆಯಾಗಲಿದೆ. ಸಾವಯವ ಮತ್ತು ಸಿರಿಧಾನ್ಯಗಳನ್ನು ಭವಿಷ್ಯದ ಪೀಳಿಗೆಯನ್ನು ಪೋಷಿಸುವ ಸಾಂಪ್ರದಾಯಿಕ ಪ್ರಜ್ಞಾವಂತ ಆಹಾರ ಎಂದು ಜನಪ್ರಿಯಗೊಳಿಸುವುದು ಮತ್ತು ಭವಿಷ್ಯಕ್ಕಾಗಿ ಪಾರಂಪರಿಕ ದೇಶೀ ತಳಿಗಳನ್ನು ಬೆಳೆಸಿ ಸಂರಕ್ಷಿಸುವುದು ಸರ್ಕಾರದ ಧ್ಯೇಯವಾಗಿದೆ. ರಾಜ್ಯದಲ್ಲಿ ರೈತ ಸಿರಿ ಯೋಜನೆಯಲ್ಲಿ ಒಟ್ಟು 106 ಕೋಟಿ ರೂ. ಸಹಾಯಧನ ನೀಡಲಾಗಿದೆ ಎಂದರು.
Laxmi News 24×7