Breaking News

ಸರ್ಕಾರಿ ಕಚೇರಿ ಮೇಲೆ ಪರಿಶೀಲನೆ ಕಾರ್ಯ ಮುಂದುವರೆಸಿದ ಲೋಕಾಯುಕ್ತರು

Spread the love

ಬೆಂಗಳೂರು: ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಮೇಲೆ ಪರಿಶೀಲನಾ ಕಾರ್ಯ ಮುಂದುವರೆಸಿರುವ ಲೋಕಾಯುಕ್ತ ಹಾಗೂ ಅಧಿಕಾರಿಗಳ ತಂಡ, ಸೋಮವಾರ ಕಾನೂನು ಹಾಗೂ ಮಾಪನ ಇಲಾಖೆಯ ಬೆಂಗಳೂರು ಪ್ರಧಾನ ಕಚೇರಿ ಸೇರಿದಂತೆ ವಿವಿಧ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಇತ್ತೀಚೆಗೆ ನಗರದ 54 ಬಿಬಿಎಂಪಿ ಕಚೇರಿಗಳ ಮೇಲೆ ತಪಾಸಣೆ ನಡೆಸಿ ನಡೆಯುತ್ತಿದ್ದ ಲೋಪದೋಷಗಳನ್ನು ಪತ್ತೆ ಹಚ್ಚಿದ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಹಾಗೂ ಬಿ. ವೀರಪ್ಪ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಒಳಗೊಂಡ 40 ಜನರ ತಂಡವು,

ಆಲಿ ಆಸ್ಕರ್ ರಸ್ತೆಯಲ್ಲಿರುವ ಮಾಪನ ಇಲಾಖೆಯ ಪ್ರಧಾನ ಕಚೇರಿ ಹೊಸಕೋಟೆ, ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿಯಲ್ಲಿ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.ಮಹಿಳಾ ಸಿಬ್ಬಂದಿಯ ಫೋನ್-ಪೇ ಪರಿಶೀಲನೆ : ಮಾಪನ ಇಲಾಖೆ ಮೇಲೆ ಮಧ್ಯಾಹ್ನ ಲೋಕಾಯುಕ್ತ ಬಿ.ಎಸ್. ಪಾಟೀಲ್ ನೇತೃತ್ವದ 36 ತಂಡವು ದಿಢೀರ್ ತೆರಳಿ ಪರಿಶೀಲನೆ ನಡೆಸಿತು.

ಕಚೇರಿಯಲ್ಲಿರುವ ಹಾಜರಾತಿ ಪುಸ್ತಕ ಸೇರಿದಂತೆ ವಿವಿಧ ರಿಜಿಸ್ಟ್ರರ್ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಹಾಜರಾತಿ ಪುಸ್ತಕದಲ್ಲಿ ಇವತ್ತಿನ ಹಾಜರಾತಿ ಜೊತೆಗೆ ನಾಳೆ ಹಾಜರಾತಿ ಹಾಕಿರುವುದನ್ನ ಕಂಡು ಗರಂ ಆದರು. ನಾಳೆಯದನ್ನ ”ಇವತ್ತೇ ಹಾಕುತ್ತೀಯಾ?, ಎಷ್ಟು ವರ್ಷದಿಂದ ಕೆಲಸ ಮಾಡುತ್ತಿದ್ದೆಯಾ?” ಎಂದು ಕೆಲಸ ಬಿಟ್ಟಿದವರ ಹೆಸರನ್ನ ಉಲ್ಲೇಖವಾಗಿರುವುದನ್ನ ಕಂಡು ಸಿಬ್ಬಂದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ