Breaking News

ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ ವಂಚನೆ

Spread the love

ನೆಲಮಂಗಲ, ಜನವರಿ 20: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ನೆರೆ ಮನೆಯ ವ್ಯಕ್ತಿಯಿಂದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವಂತಹ (fraud) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೇರೋಹಳ್ಳಿಯ ಸೌಭಾಗ್ಯ ಎಂಬುವವರಿಗೆ ವಂಚಿಸಿದ್ದ ಬಿಬಿಎಂಪಿ ಕಸದ ಗುತ್ತಿಗೆದಾರ ಹರೀಶ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ನೆಲಮಂಗಲ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಹರೀಶ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ನಿಮ್ಮ ಬಳಿ ಇರುವ ಚಿನ್ನಾಭರಣ ಒತ್ತೆ ಇಟ್ಟು ಹಣ ತಂದು ಕೊಡಿ ಅಂದಿದ್ದ ಹರೀಶ್, 90 ಗ್ರಾಂ ಚಿನ್ನವನ್ನು ಕೊಟ್ಟಿದ್ದ ಮಹಿಳೆ, ನೀವೆ ಒತ್ತೆ ಇಟ್ಟು ಹಣ ತಗೊಳಿ ಎಂದಿದ್ದಾರೆ. ಹಣ ಕೊಡುವಾಗ ಗೋಪಾಲ್ ಹಾಗೂ ಪಿಳ್ಳರಾಜು ಎಂಬುವರನ್ನ ಸಾಕ್ಷಿ ಇಟ್ಟು ಹಣ ಹಾಗೂ ಚಿನ್ನಾಭರಣವನ್ನು ಸೌಭಾಗ್ಯ ಕೊಟ್ಟಿದ್ದಾರೆ. ಆದರೆ ಎರಡು ವರ್ಷದಿಂದ ಹಣವೂ ಇಲ್ಲ, ಟೆಂಡರ್ ಇಲ್ಲದೆ ವಂಚನೆ ಮಾಡಿದ್ದಾರೆ. ಬಳಿಕ ಸೌಭಾಗ್ಯ ದೂರು ನೀಡಿದ್ದು, ಇದೀಗ ಗುತ್ತಿಗೆದಾರ ಹರೀಶ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಲಾರಿ ಹಾಗೂ ಕೆಎಸ್ಆರ್​ಟಿಸಿ ಬಸ್​ ಮಧ್ಯೆ ಅಪಘಾತ: ಹಲವರಿಗೆ ಗಾಯ

ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆ ತಾವರೆಕೆರೆ ಬಳಿ ಕಲ್ಲಿನ ಲಾರಿ ಹಾಗೂ ಕೆಎಸ್​ಆರ್​ಟಿಸಿ ಬಸ್​​ ಮಧ್ಯೆ ಅಪಘಾತ ನಡೆದಿದ್ದು, ಬಸ್ ಚಾಲಕ ಸೇರಿದಂತೆ 5 ಪ್ರಯಾಣಿಕರಿಗೆ ಗಾಯಗಳಾಗಿವೆ. ಲಾರಿಯಲ್ಲಿದ್ದ ಚಾಲಕ, ಕ್ಲಿನರ್​ಗೂ ಗಂಭೀರ ಗಾಯಗಳಾಗಿವೆ. ಬೆಂಗಳೂರಿನಿಂದ ಮಾಗಡಿಗೆ ಕೆಎಸ್ಆರ್​ಟಿಸಿ ಬಸ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ