Breaking News

ಬೆಳಗಾವಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಅವರಿಗೆ ಸ್ವಾಗತ

Spread the love

ಬೆಳಗಾವಿ: ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನದ ಉದ್ಘಾಟನೆಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು.

ವಿಶೇಷ ವಿಮಾನದಲ್ಲಿ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿ ಮತ್ತಿತರ ನಾಯಕರು ಸ್ವಾಗತಿಸಿದರು.

ಸಮಾವೇಶಕ್ಕೆ ರಾಹುಲ್ ಗಾಂಧಿ ಬರಲ್ಲ : ರಾಹುಲ್ ಗಾಂಧಿಗೆ ಹುಷಾರಿಲ್ಲದ ಕಾರಣ ಅವರು ಸಮಾವೇಶಕ್ಕೆ ಬರುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿ ಮತ್ತಿತರ ನಾಯಕರು ಬರುತ್ತಿದ್ದಾರೆ. ಹಾಗಾಗಿ, ಸಮಾವೇಶದಿಂದ ರಾಹುಲ್ ಗಾಂಧಿ ದೂರ ಎಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತಿರುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಗರಂ ಆದರು.

ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ ಮಾಡುತ್ತಿದ್ದೇವೆ. ಗಾಂಧೀಜಿ ಅವರ ತತ್ವಾದರ್ಶಗಳು ಜನಸಾಮಾನ್ಯರಿಂದ ದೂರ ಆಗುತ್ತಿವೆ. ಹಾಗಾಗಿ, ಮತ್ತೆ ಅವುಗಳನ್ನು ಜನರ ಮನಸ್ಸಿನಲ್ಲಿ ಪುನರ್ ಸ್ಥಾಪಿಸುವ ಉದ್ದೇಶ ಹೊಂದಿದ್ದೇವೆ. ಗಾಂಧೀಜಿ ಮತ್ತು ಅವರ ವಿಚಾರಧಾರೆಗಳು ಇವತ್ತಿಗೂ ಪ್ರಸ್ತುತವಾಗಿವೆ ಎಂದರು.

ಗಾಂಧೀಜಿ ಅವರು ಸೌಹಾರ್ದತೆ ಇರಬೇಕು. ಸಮಾನತೆ ಬರಬೇಕು. ಅಸ್ಪೃಶ್ಯತೆ ನಿವಾರಣೆ ಆಗಬೇಕು. ಮಹಿಳೆಯರಿಗೆ ಸ್ವಾತಂತ್ರ್ಯ ಸಿಗಬೇಕು ಮತ್ತು ಅವರ ರಕ್ಷಣೆ ಆಗಬೇಕು ಎಂದು ಪ್ರತಿಪಾದಿಸಿದ್ದರು. ಬಸವಣ್ಣ, ಗಾಂಧೀಜಿ, ಕನಕದಾಸರು ಹೇಳಿದ ವಿಚಾರಗಳನ್ನೇ ಸಂವಿಧಾನದಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ