Breaking News

ದಿನಗೂಲಿ ಕಾರ್ಮಿಕರ ಶೆಡ್‌ಗಳ ನೆಲಸಮ; ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್

Spread the love

ಬೆಂಗಳೂರು: ಯಾವುದೇ ತಿಳಿವಳಿಕೆ ನೀಡದೇ ದಿನಗೂಲಿ ನೌಕರರ ಶೆಡ್‌ಗಳನ್ನ ನೆಲಸಮಗೊಳಿಸಿ ಜಾತಿ ನಿಂದನೆ ಹಾಗೂ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ಶಾಸಕ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.

ಸೋಮವಾರ (ಜ.20) ಬೆಳಗ್ಗೆ 11ಕ್ಕೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪ ಮುನಿರತ್ನ ಅವರ ವಿರುದ್ಧ ಕೇಳಿ ಬಂದಿದ್ದು, ಶಾಸಕರು ಸೇರಿದಂತೆ ಏಳು ಜನರ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಶೆಡ್‌ಗಳನ್ನ ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ಏಕಾಏಕಿ ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿಯೊಂದಿಗೆ ಬಂದು ಶೆಡ್‌ಗಳನ್ನ ನೆಲಸಮಗೊಳಿಸಿದರು. ಇದರಿಂದಾಗಿ ನಾವು ಕೂಡಿಟ್ಟ ಹಣ, ಚಿನ್ನ ಮಣ್ಣುಪಾಲು ಮಾಡಿದ್ದಾರೆ. ತಾವು ಮನವಿ ಮಡಿದರೂ ಸಹ ಜಾತಿ ನಿಂದನೆ ಮಾಡಿ, ಮಹಿಳೆಯರಿಗೆ ಚಪ್ಪಲಿ ಕಾಲಿನಿಂದ ಒದ್ದು ಬೆದರಿಕೆ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ ಎಂದು ಎಫ್​ಐಆರ್​ನಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ