Breaking News

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾಗಿದೆ. ದಶಕಗಳ ಬೇಡಿಕೆಯ ನಂತರ ಕರ್ನಾಟಕ ಸರ್ಕಾರ ಇಂದು ಅಧಿಕೃತ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ.

Spread the love

ಧಾರವಾಡ, ಜನವರಿ 21: ಹುಬ್ಬಳ್ಳಿ- ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಇತ್ತೀಚೆಗೆ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿತ್ತು.

ಇದೀಗ ಇಂದಿನಿಂದ ಅಧಿಕೃತವಾಗಿ  ಧಾರವಾಡ ಮಹಾನಗರ ಪಾಲಿಕೆ ಎಂದು ಕರ್ನಾಟಕ ಸರ್ಕಾರದಿಂದ ಅಧಿಕೃತ ಗೆಜೆಟ್ ನೋಟಿಫಿಕೇಶನ್​ ಹೊರಡಿಸಲಾಗಿದೆ.

ಆ ಮೂಲಕ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಆಗಬೇಕು ಅನ್ನೋದು ದಶಕಗಳ ಬೇಡಿಕೆ ಕೊನೆಗೂ ಈಡೇರಿದೆ.ಹುಬ್ಬಳ್ಳಿ-ಧಾರವಾಡ ಮಹಾನಗರ ಬೇರ್ಪಡಿಸುವ ನಿರ್ಧಾರ ಯಾರೂ ತೆಗೆದುಕೊಂಡಿರಲೇ‌ ಇಲ್ಲ.

ಕೊನೆಗೂ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಂಗಡಣೆಗೆ ಅಸ್ತು ಎನ್ನಲಾಗಿತ್ತು. ಆ ನಿಟ್ಟಿನಲ್ಲಿ ಧಾರವಾಡ ಪ್ರತ್ಯೇಕ ಪಾಲಿಕೆ ಹಾದಿ ಸುಗಮವಾಗಿತ್ತು.ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬೆಂಗಳೂರು ನಂತರದ ದೊಡ್ಡ ಪಾಲಿಕೆಯಾಗಿತ್ತು. ಆದರೆ ಅನುದಾನ ಹಂಚಿಕೆ, ಅಭಿವೃದ್ಧಿ, ಅಧಿಕಾರ ಹಂಚಿಕೆ ಎಲ್ಲದರಲ್ಲಿಯೂ ಧಾರವಾಡಕ್ಕೆ ತಾರತಮ್ಯ ಆಗುತ್ತಲೇ ಇತ್ತು. ಹೀಗಾಗಿ ಹುಬ್ಬಳ್ಳಿಯಿಂದ ಬೇರ್ಪಡಿಸಿ, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಕೊಡಿ ಎನ್ನುವುದು ದಶಕಗಳ ಹೋರಾಟವಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ