Breaking News

ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕ ಕ್ರಮಗಳಾಗಲಿ: ಸಚಿವ ಪ್ರಿಯಾಂಕ್‌ ಖರ್ಗೆ

Spread the love

ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಪ್ರೊ.ಗೋವಿಂದರಾವ್‌ ಅವರ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗಕ್ಕೆ ಸಲಹೆ ನೀಡಿದರು.

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷ ಪ್ರೊ.ಗೋವಿಂದರಾವ್‌ ಹಾಗೂ ಆಯೋಗದ ಸದಸ್ಯರು ಇಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಬೆಂಗಳೂರಿನಲ್ಲಿ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ವಿವಿಧ ಇಲಾಖೆಗಳ ಸೂಕ್ಷ್ಮ ಕಾರ್ಯಕ್ರಮಗಳ ಸಮಗ್ರ ದತ್ತಾಂಶಗಳನ್ನು ಸಂಗ್ರಹಿಸುವದರೊಂದಿಗೆ ಅಧ್ಯಯನ ಮಾಡುವುದು ಸೇರಿದಂತೆ ಹಲವಾರು ವಿಷಯಗಳು ಚರ್ಚೆಯಾದವು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ಜಾರಿಗೊಂಡ ಒಂದು ದಶಕದ ಅವಧಿಯಲ್ಲಿ ಶಿಕ್ಷಣ ಕೇತ್ರದಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ, ಎಂಜನಿಯರಿಂಗ್‌, ಮೆಡಿಕಲ್‌ ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕದ ಬಹುತೇಕ ವಿದ್ಯಾರ್ಥಿಗಳು ಪ್ರವೇಶಾವಕಾಶ ಪಡೆದಿದ್ದಾರೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಜನರು ತೇರ್ಗಡೆಯಾಗಿ ಉದ್ಯೋಗಾವಕಾಶ ಹೊಂದಿದ್ದಾರೆ. ಆದಾಗ್ಯೂ ಬೇರೆ ಬೇರೆ ಕ್ಷೇತ್ರಗಳಲ್ಲಿನ ಅಸಮತೋಲನವನ್ನು ಸರಿಹೊಂದಿಸುವ ಅನಿವಾರ್ಯತೆ ಇದೆ ಸಚಿವ ಪ್ರಿಯಾಂಕ್‌ ಖರ್ಗೆ ಆಯೋಗಕ್ಕೆ ತಿಳಿಸಿದರು.

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರಿಂದ ಹಲವಾರು ಪೂರಕ ವ್ಯಾಪಾರಗಳ ಮೂಲಕ ಬದುಕು ಕಟ್ಟಿಕೊಳ್ಳುವ ಅವಕಾಶಗಳು ಲಭಿಸುವವು, ಕೃಷಿ, ತೋಟಗಾರಿಕೆ, ರೇಷ್ಮೆಯಂತಹ ಕ್ಷೇತ್ರಗಳಲ್ಲಿ ಪೂರಕ ಉದ್ಯಮಗಳಲ್ಲಿ ತೊಡಗಿಕೊಳ್ಳುವ ಮೂಲಕವೂ ಜೀವನ ಮಟ್ಟದ ಸುಧಾರಣೆ ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಆಯೋಗ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಸಚಿವರು ಆಯೋಗದ ಸಭೆಯಲ್ಲಿ ಅಭಿಪ್ರಾಯಪಟ್ಟರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.


Spread the love

About Laxminews 24x7

Check Also

ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ*

Spread the love ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ* *ಒಣ ಬೇಸಾಯ‌ ಮಾಡುವ ರೈತರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ