ಮೈಸೂರು ; ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದು ಉದಾರಿಯಾಗಿದ್ದಾರೆ.
ಮೈಸೂರಿನ ಬಂಡಿಪಾಳ್ಯ ನಿವಾಸಿ ಸುರೇಶ್ ರಸ್ತೆ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಕಣ್ಣು, ಹೃದಯ, ಕಿಡ್ನಿ ದಾನ ಮಾಡುವ ಮೂಲಕ ಮತ್ತೊಬ್ಬರ ಬದುಕಿಗೆ ಬೆಳಕಾಗಿದ್ದಾರೆ.
ಮೈಸೂರಿನ ರಿಂಗ್ ರಸ್ತೆಯಲ್ಲಿ ಐದು ದಿನಗಳ ಹಿಂದೆ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಶ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದರು.