ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು.
ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ : ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.