Breaking News

ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ‌

Spread the love

ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ‌

 

ಬೆಂಗಳೂರು, ಜನವರಿ 23: ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ತಿಕ್ಕಾಟ ನಡೆದಿದೆ. ಹೀಗಾಗಿ ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ‌ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ಮಧ್ಯಾಹ್ನ 3 ಗಂಟೆಗೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸದ್ಯ ತುರ್ತು ಸಂಪುಟ ಸಭೆ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ರಾಜಮನೆತನ ಮತ್ತು ರಾಜ್ಯ ಸರ್ಕಾ ರದ ನಡುವಿನ  ತಿಕ್ಕಾಟ ನಡೆಯುತ್ತಿದೆ. ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಬೇಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ನಾಳೆ ಸಂಪುಟ ಸಭೆ ಕರೆದಿದ್ದಾರೆ.ನಾಳೆಯ ಸಂಪುಟ ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೈಬಿಡುವ ಸಾಧ್ಯತೆ ಇದೆ. ರಸ್ತೆ ಅಗಲೀಕರಣ ಮಾಡದೇ ಇರಲು ಸರ್ಕಾರ ತೀರ್ಮಾನಿಸಿದ್ದು, ಟಿಡಿಆರ್​ ನೀಡಿದರೆ ಮುಂದಿನ ಭೂಸ್ವಾಧೀನ‌ ಪ್ರಕ್ರಿಯೆಗಳಿಗೆ ಮಾನದಂಡ ಆಗುವ ಆತಂಕ ಎದುರಾಗಿದೆ. ಹೀಗಾಗಿ ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಸರ್ಕಾರದ ನಿರ್ಧಾರವಾಗಿದ್ದು, ನಾಳೆಯ ತುರ್ತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲು ಸರ್ಕಾರ ತೀರ್ಮಾನ ಮಾಡಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ