ನವದೆಹಲಿ: ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು ಎಂದು ಬಾಲಿವುಡ್ ನಟಿ ಪ್ರಿಯಾಂಕ್ರಾ ಚೋಪ್ರಾ ಮನವಿ ಮಾಡಿದ್ದಾರೆ.ಪ್ರಿಯಾಂಕಾ ಚೋಪ್ರಾ ಅವರು ಭಾನುವಾರ ರೈತರ ಪ್ರತಿಭಟನೆಯ ಸಂಬಂಧ ತಮ್ಮ ಟ್ವೀಟ್ ನಲ್ಲಿ ಹಂಚಿಕೊಂಡರು. ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿದರು ಮತ್ತು ಕೇಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ತಮ್ಮ ಕಳವಳವನ್ನು ತುರ್ತಾಗಿ ಪರಿಹರಿಸಬೇಕೆಂದು ಎಂದು ತಿಳಿಸಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?
ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿ ಪ್ರಿಯಾಂಕಾ ಚೋಪ್ರಾ ” ನಮ್ಮ ರೈತರು ಭಾರತದ ಸೈನಿಕರು. ಅವರ ಭಯವನ್ನು ಹೋಗಲಾಡಿಸಬೇಕಾಗಿದೆ. ಅವರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ. ಈ ಬಿಕ್ಕಟ್ಟನ್ನು ಶೀಘ್ರದಲ್ಲೇ ಬಗೆಹರಿಸುವುದನ್ನು ರೈತರಿಗೆ ಖಚಿತ ಪಡಿಸಬೇಕು ಎಂದು ಉಲ್ಲೇಖಿಸಿ ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.
ಪ್ರಿಯಾಂಕಾ ಚೋಪ್ರಾ ಅವರು ರೈತರ ಪರವಾಗಿ ಮಾಡಿದ ಟ್ವೀಟ್, ಭಾರತದಿಂದ ಸಾಮಾಜಿಕ ವಿಷಯಗಳ ಬಗ್ಗೆ ಸೆಲೆಬ್ರಿಟಿಗಳು ಕೂಡ ನಿಲುವು ತಳೆಯುವ ಪ್ರವೃತ್ತಿಯನ್ನು ಹೆಚ್ಚಿಸಿದ್ದಾರೆ ಎಂದು ತಿಳಿಯುತ್ತದೆ.
Laxmi News 24×7