Breaking News

ಮಾನವ ಕಲ್ಯಾಣಕ್ಕೆ ಮಹಾವೀರ, ಪಾರ್ಶ್ವನಾಥರ ವಿಚಾರಗಳು ಮಾರ್ಗದರ್ಶಿ: ಸ್ಪೀಕರ್ ಓಂ ಬಿರ್ಲಾ

Spread the love

ಹುಬ್ಬಳ್ಳಿ: “ಮಾನವ ಕಲ್ಯಾಣಕ್ಕೆ ಮಹಾವೀರ, ಪಾರ್ಶ್ವನಾಥರ ವಿಚಾರಗಳು ಮಾರ್ಗದರ್ಶಿಯಾಗಿವೆ. ಅಹಿಂಸಾ ತತ್ವ, ಸೇವಾ ತ್ಯಾಗ ವಿಶ್ವಕ್ಕೆ ಮಾದರಿಯಾಗಿದ್ದು, ಮನುಷ್ಯ ಜೀವನಕ್ಕೆ ಮಹಾವೀರರು ಆದರ್ಶಪ್ರಾಯವಾಗಿದ್ದಾರೆ” ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದರು.

ಹುಬ್ಬಳ್ಳಿಯ ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಜೈನ ಸಂತ, ಆಚಾರ್ಯ ಮುನಿಗಳು ಮಹಾವೀರರ ವಿಚಾರಗಳನ್ನು ಜನತೆಗೆ ಮುಟ್ಟಿಸುತ್ತಿದ್ದಾರೆ. ಜೀವನದಲ್ಲಿ ಪ್ರತಿಕೂಲ ಪರಿಸ್ಥಿತಿ ಬಂದಾಗ ಸಂತರ ಬಳಿ ಹೋಗಲು ಪಾರ್ಶ್ವನಾಥರು ಹೇಳಿದ್ದರು. ಅಹಿಂಸಾ ತತ್ವದಲ್ಲಿ ದಿವ್ಯ ದೃಷ್ಟಿ ಇದೆ. ಪಾರ್ಶ್ವನಾಥರ ಭಗವಾನ​ರ ವಿಚಾರಗಳು ಸತ್ಯಕ್ಕೆ ಹತ್ತಿರವಾಗಿವೆ. ಮಾನವನ ವಿಕಾಸಕ್ಕೆ ದಾರಿದೀಪಗಳಾಗಿವೆ. ಶಾಂತಿ ಅಂದರೆ ಭಾರತ ನೆನಪಾಗುತ್ತದೆ. ಭಾರತ ಆಧ್ಯಾತ್ಮ ಕೇಂದ್ರವಾಗಿ ಮಾರ್ಪಟ್ಟಿದೆ. ಸುಮೇರು ಪರ್ವತ ಭಾರತ ಮತ್ತು ವಿಶ್ವಕ್ಕೆ ಆಧ್ಯಾತ್ಮಿಕ ಸಂದೇಶ ಕೊಡಲಿದೆ” ಎಂದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ