Breaking News

ಶ್ರೀರಾಮುಲು ಕಾಂಗ್ರೆಸ್ ಸೇರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ : ಸಚಿವ ಸತೀಶ್​ ಜಾರಕಿಹೊಳಿ (

Spread the love

ಚಿಕ್ಕೋಡಿ (ಬೆಳಗಾವಿ) : ಬಿ ಶ್ರೀರಾಮುಲು ಕಾಂಗ್ರೆಸ್ ಸೇರುವ ಕುರಿತು ನನಗೆ ಯಾವುದೇ ರೀತಿಯ ಮಾಹಿತಿ ಇಲ್ಲ. ಡಿಸಿಎಂ ಡಿ. ಕೆ ಶಿವಕುಮಾರ್ ಶ್ರೀರಾಮುಲು ಕರೆತರುವ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಾನು, ರಾಜಣ್ಣ ಸೇರಿದಂತೆ ಎಲ್ಲರೂ ಹೇಳಿದ್ದೇವೆ. ಮೊದಲಿನಿಂದಲೂ ಹೇಳುತ್ತಲೇ ಇದ್ದೇವೆ. ಶ್ರೀರಾಮುಲು ಆದಿಯಾಗಿ ನಮ್ಮ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತಿಸುತ್ತೇವೆ. ಇದೇ ಮಾತನ್ನು ಈಗಲೂ ಹಾಗೆ ನಾಳೆಯೂ ಹೇಳುತ್ತೇವೆ ಎಂದರು.ನೋಟಿಸ್ ಕೊಡ್ತಾರೆ : ರಾಮುಲು ಕಾಂಗ್ರೆಸ್ ಸೇರುವುದಕ್ಕೆ ನಾನು ವಿರೋಧಿಸಿಲ್ಲ. ಈ ಕುರಿತು ನಾನು ಯಾವುದೇ ಹೇಳಿಕೆ ನೀಡಿಲ್ಲ. ನಾನು ಯಾವುದೇ ಹೇಳಿಕೆ ನೀಡಿದರೂ ಸಹ ಹೈಕಮಾಂಡ್​ನವರು ನೋಟಿಸ್ ನೀಡುತ್ತಾರೆ. ಇವೆಲ್ಲ ಊಹಾಪೋಹಗಳು. ಇದರ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಾವು ಕರೆದರೆ ಯಾರೂ ಪಕ್ಷಕ್ಕೆ ಬರುವುದಿಲ್ಲ. ಬರುವವರು ಅವರಾಗಿಯೇ ಸ್ವಇಚ್ಛೆಯಿಂದ ಬರುತ್ತಾರೆ ಎಂದು ಹೇಳಿದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ