Breaking News

ರಾಷ್ಟ್ರೀಯ ಮಾರ್ಷಲ್ ಆರ್ಟ್ಸ್ ಮೋಯ್ ಥೈ ಕಿಕ್ ಬಾಕ್ಸಿಂಗ್ ಸ್ಪರ್ಧೆ

Spread the love

ದಾವಣಗೆರೆ : ನಗರದ ಹಳೇ ಕುಂದುವಾಡದ ನಿವಾಸಿಯಾಗಿರುವ ಶಿವಪ್ಪ, ಗಂಗಮ್ಮ ದಂಪತಿಯ ಪುತ್ರ ಜಗದೀಶ್ ಇಡೀ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ನಡೆದ ರಾಷ್ಟ್ರೀಯ ಮಾರ್ಷಲ್ ಆರ್ಟ್ಸ್ ಮೋಯ್ ಥೈ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಜ್ಯವನ್ನ ಪ್ರತಿನಿಧಿಸಿ ಗೆದ್ದು, ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಈ ಮೂಲಕ ಇಂಡೋನೇಷ್ಯಾದಲ್ಲಿ ಫೆ. 25 ಕ್ಕೆ ಜರುಗುವ ಅಂತಾರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ. ಅಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ.

ದಾವಣಗೆರೆಯ ಜಗದೀಶ್‌ ಕಿಕ್ ಬಾಕ್ಸಿಂಗ್ ಪಟು. ಇವರು ಕಿಕ್ ಬಾಕ್ಸಿಂಗ್ ಕ್ರೀಡೆಯನ್ನು ಉಸಿರಾಗಿಸಿಕೊಂಡಿದ್ದಾರೆ. ಬಡತನದಲ್ಲೇ ಅರಳಿದ ಪ್ರತಿಭೆ ಜಗದೀಶ್ ಸಾಕಷ್ಟು ಪರಿಶ್ರಮ ಪಟ್ಟು ಸಾಧನೆ ಮಾಡಿದ್ದಾರೆ.

ರಾಷ್ಟ್ರೀಯ ಮಾರ್ಷಲ್ ಆರ್ಟ್ಸ್​ನ ಮೋಯ್ ಥೈ ಕಿಕ್ ಬಾಕ್ಸಿಂಗ್ ಫೈನಲ್ ಸ್ಪರ್ಧೆಯಲ್ಲಿ 58 ಕೆಜಿ ವಿಭಾಗದಲ್ಲಿ ಕಿಕ್ ಬಾಕ್ಸರ್ ಜಗದೀಶ್ ಮೇಘಾಲಯ ರಾಜ್ಯದ ಕಿಕ್ ಬಾಕ್ಸರ್ ಪಟುವನ್ನು ಮಣಿಸಿ ಗೆದ್ದು ಬೀಗಿದ್ದಾರೆ.

ಈ ಮೂಲಕ ಇಂಡೋನೇಷ್ಯಾದಲ್ಲಿ ಜರಗುವ ಅಂತಾರಾಷ್ಟ್ರೀಯ ಮಟ್ಟದ ಮೋಯ್ ಥೈ ಕಿಕ್ ಬಾಕ್ಸಿಂಗ್ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ