Breaking News

ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಸುನೀಲ್‌ ಎಂಬುವವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಈ ಬಗ್ಗೆ ದೂರು ದಾಖಲಾಗಿದೆ.

Spread the love

ಬಳ್ಳಾರಿ: ವಾಕಿಂಗ್ ಮಾಡುತ್ತಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್​ ಅವರನ್ನು ಯಾರೋ ದುಷ್ಕರ್ಮಿಗಳು ಇಂದು ಬೆಳಗ್ಗೆ ಅಪಹರಿಸಿರುವುದಾಗಿ ಅವರ ಸಹೋದರ ವೇಣು ಎಂಬುವರು ಗಾಂಧಿನಗರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ.

DOCTOR KIDNAPED

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

ವೈದ್ಯ ಸುನೀಲ್ ಅವರು ಇಂದು​ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ಸೂರ್ಯನಾರಾಯಣಪೇಟೆಯ ಶನೇಶ್ವರಗುಡಿ ಬಳಿ​ ಬರುತ್ತಿದ್ದಂತೆ ಟಾಟಾ ಇಂಡಿಗೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಸುನೀಲ್ ಅವರ ಬಾಯಿ ಮುಚ್ಚಿ ಕಾರಿನಲ್ಲಿ ಎಳೆದೊಯ್ದಿದ್ದಾರೆ ಎಂದು ಸಹೋದರ ವೇಣು ದೂರು ನೀಡಿದ್ದಾರೆ.

ಅಪಹರಣಕಾರರು ಭಾರೀ ಮೊತ್ತಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಇದ್ದು, ಈ ಬಗ್ಗೆ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

ಸಹೋದರ ವೇಣು ಅವರು ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರೂ ಆಗಿದ್ದಾರೆ. ವೈದ್ಯ ಸುನೀಲ್ ಅವರ ಮೊಬೈಲ್​ನಿಂದ ವೇಣುಗೆ ಕರೆ ಮಾಡಿದ ಅಪಹರಣಕಾರರು ಭಾರಿ ಪ್ರಮಾಣದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಂತೆ ವೇಣು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ದೂರು ಪಡೆದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಈ ಅಪಹರಣ ವಿಚಾರ ತಿಳಿಯುತ್ತಿದ್ದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸತ್ಯನಾರಾಯಣ ಪೇಟೆಯಲ್ಲಿರುವ ವೈದ್ಯ ಸುನೀಲ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಇದೇ ವೇಳೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಶೋಭಾರಾಣಿ ಅವರೊಂದಿಗೂ ಮಾತನಾಡಿದ ಜನಾರ್ದನ ರೆಡ್ಡಿ, ಕೂಡಲೇ ಅಪಹರಣಕಾರರನ್ನು ಹಿಡಿಯುವಂತೆ ಮನವಿ ಮಾಡಿದರು. ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿರುವುದಾಗಿ ಎಸ್​ಪಿ ತಿಳಿಸಿದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ