Breaking News

ಅಧಿವೇಶನದ ಮೊದಲ ದಿನವೇ ವಿಧಾನಸಭೆ ಖಾಲಿ ಖಾಲಿ..!

Spread the love

ಬೆಂಗಳೂರು, ಡಿ.7- ಚಳಿಗಾಲದ ಅಧಿವೇಶನದ ಮೊದಲ ದಿನವೇ ವಿಧಾನಸಭೆ ಖಾಲಿ ಖಾಲಿ ಹೊಡೆದಿತ್ತು. ಆಡಳಿತ ಮತ್ತು ಪ್ರತಿಪಕ್ಷಗಳ ಸಾಲಿನಲ್ಲಿ ಬೆರಳೆಣಿಕೆಯಷ್ಟು ಸದಸ್ಯರು ಮಾತ್ರ ಹಾಜರಿದ್ದರು. ಉಳಿದಂತೆ ಬಹುತೇಕ ಆಸನಗಳು ಖಾಲಿ ಖಾಲಿಯಾಗಿದ್ದವು.

ಆಡಳಿತ ಪಕ್ಷದಿಂದ ಮುಖ್ಯಮಂತ್ರಿ ಸೇರಿದಂತೆ 12 ಸಚಿವರು, 26 ಶಾಸಕರು, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‍ನ 25 ಶಾಸಕರು ಹಾಗೂ ಜೆಡಿಎಸ್‍ನಿಂದ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಐವರು ಶಾಸಕರು ಮಾತ್ರ ಹಾಜರಾಗಿದ್ದರು.

ಸದನದ ಕಲಾಪ 11 ಗಂಟೆಗೆ ಆರಂಭವಾಗುತ್ತಿದ್ದಂತೆ ಸಭಾಪತಿ ವಿಶ್ವೇಶ್ವರಹೆಗಡೆ ಕಾಗೇರಿ ಅವರು ಸಂತಾಪ ನಿರ್ಣಯ ಮಂಡಿಸಿದರು. ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆತುರಾತುರವಾಗಿ ಸಂತಾಪ ನಿರ್ಣಯ ಬೆಂಬಲಿಸಿ ಕೆಲವೇ ನಿಮಿಷಗಳಲ್ಲಿ ತಮ್ಮ ಮಾತುಗಳನ್ನು ಮುಗಿಸಿ ಸದನದಿಂದ ನಿರ್ಗಮಿಸಿದರು.

ಆಡಳಿತ ಪಕ್ಷದ ಮೊದಲ ಸಾಲಿನಲ್ಲಿ ಉಪ ಮುಖ್ಯಮಂತ್ರಿ ಗೋವಿಂದಕಾರಜೋಳ, ಸಚಿವ ಜೆ.ಸಿ.ಮಾಧುಸ್ವಾಮಿ, ಆರ್.ಅಶೋಕ್, ಎರಡನೆ ಸಾಲಿನಲ್ಲಿ ಸುರೇಶ್‍ಕುಮಾರ್, ಪ್ರಭುಚೌವ್ಹಾಣ್, ಶಶಿಕಲಾ ಜೊಲ್ಲೆ, ಬಿ.ಸಿ.ಪಾಟೀಲ್ ಬಿಟ್ಟರೆ ಬಹುತೇಕ ಕುರ್ಚಿಗಳು ಖಾಲಿಯಾಗಿದ್ದವು.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ