ಕೊಪ್ಪಳ, : ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಗೆ (Padma Shri) ತೊಗಲುಗೊಂಬೆ ಆಟದ ಹಿರಿಯ ಕಲಾವಿದೆಯಾಗಿರುವ ಜಿಲ್ಲೆಯ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಳ್ಳಪ್ಪ ಶಿಳ್ಳೇಕ್ಯಾತ ಅವರಿಗೆ ಒಲಿದು ಬಂದಿದೆ. ಭೀಮವ್ವ ಅನಕ್ಷರಸ್ಥೆಯಾಗಿದ್ದರು ಬಾಲ್ಯದಿಂದಲೇ ತೊಗಲುಗೊಂಬೆಯಾಟ ಕಲೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ.
ಇಂದಿನ ಆಧುನಿಕ ಯುಗದಲ್ಲಿ ಅನೇಕ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿವೆ. ಆಧುನಿಕ ಗಾಜೆಟ್ಗಳಲ್ಲಿ ಬ್ಯೂಸಿಯಾಗಿರುವ ಇಂದಿನ ಯುಗದ ಯುವಜನತೆಗೆ ಗ್ರಾಮೀಣ ಕ್ರೀಡೆಗಳ ಮಹತ್ವದ ಅರಿವು ಕಡಿಮೆ. ಆದರೆ ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ ಶಿಳ್ಳೇಕ್ಯಾತ ಎಂಬ ಕುಟುಂಬಕ್ಕೆ ಕುಟುಂಬವೇ ಗ್ರಾಮೀಣ ಕಲೆಯಲ್ಲಿ ತೊಡಗಿಸಿಕೊಂಡಿದೆ. ಗ್ರಾಮೀಣ ಕಲೆ ತೊಗಲು ಗೊಂಬೆಯಾಟದ ಮೂಲಕ ಆ ಕುಟುಂಬ ಜನಮಾನಸದಲ್ಲಿ ಉಳಿದುಕೊಂಡಿದೆ.
ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತ ಹಿನ್ನಲೆ
ಕೊಪ್ಪಳದ ಇರಕಲ್ಲಗಡಾದ ಹನುಮಟ್ಟಿಯ ಸಂಜೀವಪ್ಪ ಹೊಳೆಯಮ್ಮರ ಮಗಳಾದ ಭೀಮವ್ವ, ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದಲ್ಲಿ 1929 ರಲ್ಲಿ ಜನಿಸಿದ್ದರು. ತಮ್ಮ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನ ಕುಲ ಕಸುಬಾಗಿ ಮಾಡುತ್ತಾ ಬಂದಿದ್ದಾರೆ. ಸದ್ಯ ಇದೇ ಕಲೆಯಲ್ಲಿ ಮಹತ್ತರ ಸಾಧನೆ ಕೂಡ ಮಾಡಿದ್ದಾರೆ. ಅಮೇರಿಕ, ಪ್ಯಾರಿಸ್, ಇಟಲಿ, ಇರಾನ್, ಇರಾಕ್, ಸ್ವಿಟ್ಜರ್ಲೆಂಡ್ ಮತ್ತು ಹಾಲೆಂಡ್ ಮುಂತಾದ ದೇಶಗಳಲ್ಲಿ ರಾಮಾಯಣ, ಮಹಾಭಾರತದಂತಹ ಮಹಾಕಾವ್ಯ ಹಾಗೂ ಪ್ರಸ್ತುತ ವಿದ್ಯಮಾನಗಳನ್ನು ತೊಗಲುಗೊಂಬೆಯಾಟದ ಮೂಲಕ ಪ್ರದರ್ಶನ ನೀಡಿ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನ ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
Laxmi News 24×7