Breaking News

ಇನ್​ಸ್ಟಾಗ್ರಾಮ್​ನಲ್ಲಿ ಯುವತಿಯ ಫೋಟೋಗೆ ಲೈಕ್, ಪ್ರೇಯಸಿಯಿಂದ ತರಾಟೆ: ಪ್ರಿಯಕರ ಆತ್ಮಹತ್ಯೆಗೆ ಶರಣು

Spread the love

ಮಂಗಳೂರು, ಜನವರಿ 25: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಸಾಮಾಜಿಕ ಜಾಲತಾಣದ ಗೀಳು ಹೆಚ್ಚಾಗಿದೆ. ಸಾಮಾಜಿಕ ಜಾಲತಾಣದ ಫೋಸ್ಟ್​ ಮಾಡುವ ಫೋಟೋಗಳಿಗೆ ಹೆಚ್ಚಿನ ಲೈಕ್​ ಮತ್ತು ಕಾಮೆಂಟ್​​ ಬರಲಿ ಎಂಬ ಉದ್ವಿಗ್ನತೆಯಲ್ಲಿರುತ್ತಾರೆ. ಆದರೆ, ಇದೇ ಉದ್ವಿಗ್ನತೆ ಎಷ್ಟೋ ಜನರ ಪ್ರಾಣ ಕಸಿದುಕೊಂಡಿದೆ. ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ‌ (Bantwal) ತಾಲೂಕಿನ ಪೂಂಜಾಲಕಟ್ಟೆ ಕುಕ್ಕಿಪ್ಪಾಡಿಯ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚೇತನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.ಮೃತ ಚೇತನ್​ಗೆ ಕುಂದಾಪುರದ ಚೈತನ್ಯ ಎಂಬ ಯುವತಿಯು ಇನ್​ಸ್ಟ್ರಾಗ್ರಾಂನಲ್ಲಿ ಪರಿಚಯವಾಗಿದ್ದಳು. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು, ಸ್ನೇಹ ಪ್ರೀತಿಗೆ ತಿರುಗಿತ್ತು. 8 ತಿಂಗಳ ಹಿಂದೆ ಇಬ್ಬರ ನಿಶ್ಚಿತಾರ್ಥವಾಗಿತ್ತು. ಜನವರಿ 21 ರಂದು ಚೇತನ್ ತನ್ನ ಪರಿಚಯದ ಬೇರೊಂದು ಯುವತಿಯ ಫೋಟೋಗೆ ಇನ್ಸ್ಟಾಗ್ರಾಮ್​ನಲ್ಲಿ ಲೈಕ್ ಕೊಟ್ಟಿದ್ದನು.

ಇದನ್ನು ಪ್ರಶ್ನಿಸಲು ಚೈತನ್ಯ ಭಾವಿ ಪತಿ ಚೇತನ್ ಮನೆಗೆ ಬಂದಿದ್ದರು. ಈ ವೇಳೆ ಚೇತನ್ ಮನೆಯಲ್ಲಿ ಒಬ್ಬರೇ ಇದ್ದರು. ಯುವತಿಯ ಫೋಟೋಗೆ ಲೈಕ್ ನೀಡಿದ್ದಕ್ಕೆ ಚೇತನ್​ನನ್ನು ಚೈತನ್ಯ ತರಾಟೆಗೆ ತೆಗೆದುಕೊಂಡಿದ್ದಳು.

ಇದರಿಂದ ಮನನೊಂದ ಚೇತನ್ ಯುವತಿ ಮನೆಯಲ್ಲಿ ಇರುವಾಗಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಳಿಕ‌ ಚೇತನ್ ತಾಯಿಗೆ ಕರೆ ಮಾಡಿದ ಚೈತನ್ಯ ಮಲಗಿದ್ದಾತ ಮೇಲೆ ಏಳುತ್ತಿಲ್ಲ ಎಂದು ಹೇಳಿದ್ದಾನೆ. ಕೂಡಲೇ ಚೇತನ್​ ತಾಯಿ ಮನೆಗೆ ಬಂದು ನೋಡಿದಾಗ, ಮನೆಯ ಮೆಲ್ಚಾವಣಿಯಲ್ಲಿ ನೇಣು ಬಿಗಿದ ಕುಣಿಕೆ ಸಿಕ್ಕಿತ್ತು. ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ