Breaking News

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ

Spread the love

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಗೌರವವಂದನೆ ಸ್ವೀಕರಿಸಿ ಮಾತನಾಡಿದೆ.

ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮ ಅಧಿಕಾರವನ್ನು ಕಲ್ಪಿಸಿದ ದಿನ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಭವ್ಯ ಭಾರತಕ್ಕೆ ದಾರಿದೀಪವಾಗಿದೆ. ಜಗತ್ತಿನ ಪ್ರಬಲ ರಾಷ್ಟ್ರವಾಗಿ ಭಾರತ ಹೊರಹೊಮ್ಮಲು ಅದು ಬುನಾದಿಯಾಗಿದೆ.

ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪಿಗಾಗಿ ವರ್ಷವಿಡೀ ಕಾರ್ಯಕ್ರಮಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಪ್ರಕಟಿಸಿದೆ.

“ಈ ವೇಳೆ ಪೊಲೀಸರು ಮತ್ತು ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು.”

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಶಾಸಕರಾದ ಶ್ರೀ ಆಶೀಪ್ ಸೇಠ್, ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಪಂ ಸಿಇಓ ರಾಹುಲ್‌ ಸಿಂಧೆ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ