Breaking News

ಸಚಿವ ಆರ್.ಅಶೋಕ್ ವಿರುದ್ಧ ಸ್ಪೀಕರ್ ಗರಂ

Spread the love

ಬೆಂಗಳೂರು, ಡಿ.7- ಸಾಫ್ಟ್‍ವೇರ್‍ನಲ್ಲಿರುವ ದೋಷದಿಂದಾಗಿ ಪಹಣಿಯ ಬೆಳೆ ಕಾಲಂನಲ್ಲಿ ಕುಷ್ಕಿ ಎಂದು ಅಧಿಕಾರಿಗಳು ನಮೂನೆ ಮಾಡುತ್ತಿದ್ದು, ರೈತರಿಗೆ ಯಾವುದೇ ರೀತಿಯ ಸಾಲ ಸೌಲಭ್ಯ ಸಿಗುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರ ಮೇಲೆ ವಿಧಾನಸಭೆ ಸ್ಪೀಕರ್ ಸೇರಿದಂತೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಮುಗಿಬಿದ್ದ ಘಟನೆ ವಿಧಾನಸಭೆಯಲ್ಲಿ ನಡೆಯಿತು.

ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಡಿ.ಪಿ.ರಾಜೇಗೌಡ ಆವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಲು ಕಂದಾಯ ಸಚಿವ ಅಶೋಕ್ ಆವರು ಮುಂದಾಗುತ್ತಿದ್ದಂತೆ ಸ್ಪೀಕರ್ ಕಾಗೇರಿ ಸೇರಿದಂತೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಅಧಿಕಾರಿಗಳು ನೀಡಿದ ವರದಿಯನ್ನ ಸದನಕ್ಕೆ ಒಪ್ಪಿಸಬೇಡಿ ಎಂದು ಪರೋಕ್ಷವಾಗಿ ಅಶೋಕ್ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಕಾಗೇರಿ ಅವರು ಕಳೆದ ಎರಡು ವರ್ಷಗಳಿಂದ ಸಾಫ್ಟ್‍ವೇರ್ ದೋಷದಿಂದಾಗಿ ಪಹಣಿಯ ಬೆಳೆ ಕಾಲಂನಲ್ಲಿ ಕುಷ್ಕಿ ಎಂದು ಅಧಿಕಾರಿಗಳು ನಮೂನೆ ಮಾಡುತ್ತಿದ್ದಾರೆ. ಇದರ ಪರಿಣಾಮ ಅಡಿಕೆ, ಏಲಕ್ಕಿ, ಬಾಳೆ ಸೇರಿದಂತೆ ವಿವಿಧ ಬೆಳೆಗಳಿಗೆ ಸಾಲ ಕೊಡುತ್ತಿಲ್ಲ ಎಂದು ಕಿಡಿಕಾರಿದರು. ನೀವು ಸಾಫ್ಟ್‍ವೇರನ್ನು ಖಾಸಗಿ ಏಜೆನ್ಸಿಗಳಿಗೆ ಕೊಟ್ಟಿರುತ್ತೀರಿ. ಅದನ್ನು ಕಾಲಮಿತಿಯೊಳಗೆ ಸರಿಪಡಿಸದಿದ್ದರೆ ನಿಮ್ಮ ಅಧಿಕಾರಿಗಳೇ ಸರ್ಕಾರದ ಮರ್ಯಾದೆ ಕಳೆಯುತ್ತಾರೆ ಎಂದು ಕಿಡಿಕಾರಿದರು.

ಮೊದಲು ಈ ಸಮಸ್ಯೆಯನ್ನು ಸರಿಪಡಿಸಿ. ಇದರಿಂದ ಗ್ರಾಮೀಣ ಭಾಗಗಳಲ್ಲಿ ರೈತರು ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ನೀಡುವ ವರದಿಯನ್ನು ಸದನದಲ್ಲಿ ಮಂಡಿಸಬೇಡಿ. ವಾಸ್ತವ ಏನಿದೆ ಎಂಬುದನ್ನು ತಿಳಿದುಕೊಳ್ಳಿ ಎಂದು ಸ್ಪೀಕರ್ ಸಲಹೆ ಮಾಡಿದರು. ಇದಕ್ಕೆ ದನಿಗೂಡಿಸಿದ ಶಾಸಕರಾದ ಅರಗ ಜ್ಞಾನೆಂದ್ರ, ಅಶೋಕ್‍ನಾಯಕ್, ರಾಜೇಗೌಡ, ಎಚ್.ಕೆ.ಕುಮಾರಸ್ವಾಮಿ, ಶಿವಲಿಂಗೇಗೌಡ ಸೇರಿದಂತೆ ಮತ್ತಿತರರು, ರೈತರು ಎದುರಿಸುತ್ತಿರುವ ಕಷ್ಟಗಳನ್ನು ಸದನದ ಗಮನಕ್ಕೆ ತಂದರು.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ