Breaking News

ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

Spread the love

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ ಇರುತ್ತಿರಲಿಲ್ಲ. ಹಲವರು ತಮ್ಮ ಕೈಯಿಂದ ಖರ್ಚು ಮಾಡಿ ಆಧಾರ್ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೊತ್ಸಾಹ ಧನ ನೀಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಚಲಿಸುತ್ತಿದ್ದ ಬೈಕನಲ್ಲಿ ಕಾಣಿಸಿಕೊಂಡ ಬೆಂಕಿ,

Spread the love ಚಲಿಸುತ್ತಿದ್ದ ಬೈಕನಲ್ಲಿ ಕಾಣಿಸಿಕೊಂಡ ಬೆಂಕಿ, ತಪ್ಪಿದ ದುರಂತ…ಸ್ಥಳೀಯ ನೀರಿನ‌ ಟ್ಯಾಂಕ್ ಬಳಸಿ ಬೆಂಕಿ ನಂದಿಸಿದ ಜನ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ