Breaking News

ಪತ್ನಿಯ ಜೊತೆ ಮೊಬೈಲ್ ನಲ್ಲಿ ಮಾತುನಾಡುತ್ತಲೇ ಕಾರ್ಮಿಕನೊಬ್ಬ ನೇಣಿಗೆ

Spread the love

ಹುಬ್ಬಳ್ಳಿ: ಪತ್ನಿಯ ಜೊತೆ ಮೊಬೈಲ್ ನಲ್ಲಿ ಮಾತುನಾಡುತ್ತಲೇ ಕಾರ್ಮಿಕನೊಬ್ಬ ನೇಣಿಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮೋಹನ್ ಸಿಂಗ್ ಆತ್ಮಹತ್ಯೆಗೆ ಶರಣಾದ ಕಾರ್ಮಿಕನಾಗಿದ್ದು, ಪಶ್ಚಿಮಬಂಗಾಳ ಮೂಲದ ನಿವಾಸಿ. ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮೋಹನ್ ಸಿಂಗ್ ತಂದೆಯ ಸಾವಿನಿಂದ ಮನನೊಂದಿದ್ದರು.ಕಳೆದ ಎರಡು ತಿಂಗಳ ಹಿಂದೆ ಪಶ್ಚಿಮ ಬಂಗಾಳದಿಂದ ಕೆಲಸಕ್ಕೆಂದು ಬಂದು ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಫೇವರ್ಸ್ ಕಂಪನಿಯಲ್ಲಿ ಮೋಹನಸಿಂಗ್ ಕೆಲಸಕ್ಕೆ ಸೇರಿಕೊಂಡಿದ್ದರು. ತಂದೆಯ ಸಾವಿನ ದುಃಖದಲ್ಲಿಯೇ ತನ್ನ ತುಂಬು ಗರ್ಭಿಣಿ ಹೆಂಡತಿಯ ಜೊತೆ ಮಾತನಾಡುತ್ತಲೇ ನೇಣಿಗೆ ಶರಣಾಗಿದ್ದಾರೆ.

ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಗಂಡನ ಮಾತುಗಳನ್ನ ಕೇಳಿ ಪತ್ನಿ ಗಾಬರಿಗೊಂಡಿದ್ದಾರೆ. ಕೂಡಲೇ ಗಂಡನ ಜೊತೆ ಕೆಲಸ ಮಾಡುವ ಸಹ ಕಾರ್ಮಿಕ ಶುಭಾಷಿನ ಎಂಬಾತನಿಗೆ ಕರೆ ಮಾಡಿ ನನ್ನ ಗಂಡ ಹೀಗೆ ಮಾಡುತ್ತಿದ್ದಾನೆ ಎಂದು ಹೇಳಿದ್ದಾರೆ. ಅಷ್ಟರಲ್ಲಿಯೇ ಅಲ್ಲಿಗೆ ಹೋದ ಸಹ ಕಾರ್ಮಿಕರು ನೇಣಿನಲ್ಲಿದ್ದವನನ್ನ ಕೆಳಗಿಳಿಸಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕ ಮೃತಪಟ್ಟಿದ್ದಾರೆ.

ಬಗ್ಗೆ ಕಾರ್ಮಿಕನ ಕುಟುಂಬಕ್ಕೆ ಗ್ರಾಮೀಣ ಪೊಲೀಸರು ಮಾಹಿತಿ ನೀಡಿದ್ದು, ಶವವನ್ನ ಕಿಮ್ಸ್ ನ ಶವಾಗಾರದಲ್ಲಿಡಲಾಗಿದೆ. ಪ್ರಕರಣ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಬಡವರ ಬದುಕಿನ ಆಧಾರ ‘ಮನರೇಗಾ’ ಉಳಿವಿಗೆ ನಮ್ಮ ಹೋರಾಟ!

Spread the love ಬಡವರ ಬದುಕಿನ ಆಧಾರ ‘ಮನರೇಗಾ’ ಉಳಿವಿಗೆ ನಮ್ಮ ಹೋರಾಟ! ​AICC ಹಾಗೂ KPCC ಮಾರ್ಗದರ್ಶನದಂತೆ, ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ