ಬೆಳಗಾವಿ: ಪ್ರಯಾಗ್ರಾಜ್ ಮಹಾಕುಂಭಮೇಳದದಲ್ಲಿ ಪಾಲ್ಗೊಂಡಿದ್ದ ಬೆಳಗಾವಿ ನಾಲ್ವರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದು ದೃಢವಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕೃತ ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ (50) ಮತ್ತು ಮೇಘಾ ಹತ್ತರವಾಟ ಮೃತರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿತ್ತು. ಇದಾದ ಬಳಿಕ ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.
![]()
ಅರುಣ ಅವರು ಪತ್ನಿ ಜೊತೆಗೆ ಪ್ರಯಾಗ್ರಾಜ್ಗೆ ತೆರಳಿದ್ದರು. ಬುಧವಾರ ಬೆಳಿಗ್ಗೆ ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಅರುಣ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಅರುಣ್ ಮನೆಗೆ ಬೆಳಗಾವಿ ತಹಶೀಲ್ದಾರ್ ಸಿಬ್ಬಂದಿ ಭೇಟಿ ನೀಡಿ ಮಾಹಿತಿ ಖಚಿತ ಪಡಿಸಿದ್ದಾರೆ.
ಅದೇ ರೀತಿ ಶಿವಾಜಿ ನಗರದ ನಿವಾಸಿ ಮಹಾದೇವಿ ಬಾವನೂರ (51) ಕೂಡ ಸಾವನ್ನಪ್ಪಿದ್ದಾರೆ. ಇವರ ಮನೆಗೆ ಶಾಸಕ ರಾಜು ಸೇಠ್ ಕುಟುಂಬಸ್ಥರನ್ನು ಭೇಟಿಯಾಗಿ ವಿಷಯ ಮುಟ್ಟಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ನಾಲ್ವರ ಸಾವಿನಿಂದ ಬೆಳಗಾವಿಯಲ್ಲಿ ಆತಂಕದ ಮನೆ ಮಾಡಿದ್ದು, ಮೃತರ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ. ದಿಕ್ಕೆ ತೋಚದಂತಾಗಿ ಕಣ್ಣೀರು ಸುರಿಸುತ್ತಿದ್ದಾರೆ.
Laxmi News 24×7