Breaking News

ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ

Spread the love

ಬೆಂಗಳೂರು : ಭೂ ದಾಖಲೆಗಳ ರಕ್ಷಣೆಗೆ ಹಾಗೂ ವಂಚಕರಿಂದ ದುರುಪಯೋಗ ಆಗದಂತೆ, ದಾಖಲೆ ತಿದ್ದಲು ಅವಕಾಶ ಆಗದಂತೆ “ಭೂ ಸುರಕ್ಷಾ” ಪರಿಣಾಮಕಾರಿಯಾಗಿ ಜಾರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಈಗಾಗಲೇ 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣವಾಗಿದ್ದು, ಖದೀಮರು ತಿದ್ದಲು ಅವಕಾಶ ಆಗದಂತೆ ದಾಖಲೆಗಳಿಗೆ ಡಿಜಿಟಲ್ ಭದ್ರತೆ ಒದಗಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಸಭೆಯ ಇತರ ಹೈಲೈಟ್ಸ್ ಗಳು : ತಂತ್ರಾಂಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣಾ ಕಾರ್ಯ ಕೈಗೊಳ್ಳಲಾಗಿದೆ. ನಕ್ಷಾ ಯೋಜನೆ ಮೂಲಕ ನಗರ ಪ್ರದೇಶದಲ್ಲಿ ಡ್ರೋನ್‌ ಸರ್ವೇ ಮೂಲಕ ಪ್ರಾಪರ್ಟಿ ಕಾರ್ಡು ನೀಡುತ್ತಿದ್ದೇವೆ. 21 ಜಿಲ್ಲೆಗಳಲ್ಲಿ ಡ್ರೋನ್‌ ಮೂಲಕ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಡ್ರೋನ್ ಸರ್ವೇ ಆರಂಭಿಸಲು ಸಿಎಂ ಸೂಚನೆ.


Spread the love

About Laxminews 24x7

Check Also

ಬಿಜೆಪಿಯವರು ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಧಿಕ್ಕಾರ ಕೂಗಿದ್ರೇ ದೊಡ್ಡ ಸಾಧನೆನಾ?? ; ಸಚಿವೆ ಶಿವರಾಜ್ ತಂಗಡಗಿ

Spread the love ಕಾಂಗ್ರೆಸನವರಿಗೆ ಪಾಕ್ ಜೊತೆ ಯುದ್ಧ ಮಾಡಿದ್ದು ಗೊತ್ತು. ಗೆದ್ದಿದ್ದು ಗೊತ್ತು… ಬಿಜೆಪಿಯವರು ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ