Breaking News

ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ.

Spread the love

ಹಾವೇರಿ: ರಾಣೆಬೆನ್ನೂರು ನಗರದ ಪಿ.ಬಿ ರಸ್ತೆಯಲ್ಲಿ ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಸ್ಕೂಟಿ ಮೇಲೆ ಕಾರ್ ಹರಿದ ಪರಿಣಾಮ ದ್ವಿಚಕ್ರ ಅಪ್ಪಚ್ಚಿಯಾಗಿದೆ.52 ವರ್ಷದ ಶಂಕರಗೌಡ ಪಾಟೀಲ್ ಮೃತ ದ್ವಿಚಕ್ರ ಸವಾರ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ. ಪೊಲೀಸರು ಕಾರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಸ್ಕೂಟಿಗೆ ಡಿಕ್ಕಿಯಾದ ಕಾರ್ ಡಿವೈಡರ್ ಮೇಲೆ ಬಂದು ನಿಂತಿದೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ರಾಣೇಬೆನ್ನೂರು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಾಣೆಬೆನ್ನೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ,


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ