Home / Uncategorized / ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಬಿಟ್ಟು ಬಿಡದೇ ತುಂತುರು ಮಳೆ

ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಬಿಟ್ಟು ಬಿಡದೇ ತುಂತುರು ಮಳೆ

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಬಿಟ್ಟು ಬಿಡದೇ ತುಂತುರು ಮಳೆ ಸುರಿಯುತ್ತಿದೆ.ನಿವಾರ್ ಮತ್ತೆ ಬುರೇವಿ ಚಂಡ ಮಾರುತದ ಬಳಿಕ ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಮತ್ತೊಂದು ಚಂಡಮಾರುತ ಉಂಟಾಗಿದೆ. ಈ ಚಂಡಮಾರುತ ಭಾರತ ಸೇರಿದಂತೆ 13 ದೇಶಗಳ ಮೇಲೆ ಅಪ್ಪಳಿಸಲಿದೆ. ಅದರಲ್ಲೂ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ.

ಬುರೇವಿ ಚಂಡ ಮಾರುತ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತುಂತುರು ಮಳೆ ಮತ್ತು ಮೋಡ ಕವಿದ ವಾತಾವರಣ ಇರಲಿದೆ. ಈ ಮಳೆ ಇಂದು ರಾಜ್ಯದಲ್ಲಿ ರೈತರ ಬಂದ್ ಮತ್ತು ಪ್ರತಿಭಟನೆಗೆ ಮಳೆ ಅಡ್ಡಿಯಾಗುತ್ತಾ ಎಂಬ ಪ್ರಶ್ನೆ ಮೂಡಿದೆರೈತ ಸಂಘಟನೆಗಳ ಜೊತೆ ವಿವಿಧ ಸಂಘಟನೆಗಳು ಬಂದ್ ಬೆಂಬಲ ಕೊಟ್ಟಿವೆ. ಬೆಂಗಳೂರಿನಲ್ಲಿ ಮೂಲೆ ಮೂಲೆಯಿಂದ ರೈತರು ರ್ಯಾಲಿ ಹೊರಡುತ್ತಾರೆ. ಈ ತುಂತುರು ಮಳೆ ಮುಂದುವರಿದರೆ ಇಂದಿನ ಹೋರಾಟಕ್ಕೆ ಅಡ್ಡಿಯಾಗುವ ಆತಂಕ ಎದುರಾಗಿದೆ. ಮಳೆ- ಗಾಳಿಗೂ ಜಗ್ಗದೇ ರೈತರು ಮತ್ತು ವಿವಿಧ ಸಂಘಟನೆಗಳು ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸಿ ಹೋರಾಟ ಮಾಡೋದು ಪಕ್ಕಾ ಆಗಿದೆ. ಆದರೆ ಈ ತುಂತುರು ಮಳೆ ನಿಲ್ಲುತ್ತಾ ಅಥವಾ ಇಡೀ ಮುಂದುವರಿಯುತ್ತಾ ಕಾದು ನೋಡಬೇಕಿದೆ.


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ