Breaking News

ಮೈಕ್ರೋ ಫೈನಾನ್ಸ್​​​​​​​ ಕಿರುಕುಳ: 2-3 ದಿನಗಳಲ್ಲಿ ಸುಗ್ರೀವಾಜ್ಞೆ

Spread the love

ಬೆಂಗಳೂರು: “ಇನ್ನೆರಡು ಮೂರು ದಿನಗಳಲ್ಲಿ ಮೈಕ್ರೋ ಫೈನಾನ್ಸ್​​​​​​​ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ಬಗ್ಗೆ ಸಿಎಂ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್​​​ ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿಂದು ಮಾತನಾಡಿದ ಅವರು​​, ಮೈಕ್ರೋ ಫೈನಾನ್ಸ್​​​​​​​ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ವಿಳಂಬವಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, “ಇನ್ನೆರಡು ಮೂರು ದಿನಗಳಲ್ಲಿ ಸುಗ್ರೀವಾಜ್ಞೆ ಬಗ್ಗೆ ಅಂತಿಮ ತಿರ್ಮಾನವನ್ನು ಸಿಎಂ ತಗೋತಾರೆ. ಸಿಎಂ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ.

ಕಾನೂನು, ಸಂಸದೀಯ ವ್ಯವಹಾರ, ಆರ್ಥಿಕ‌ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ. ಈಗಾಗಲೇ ಹಲವು ಕಾನೂನುಗಳಿವೆ ಈ ಕಾನೂನುಗಳ ಅಧ್ಯಯನ ನಡೆಸಿ ಹೊಸ ಕಾನೂನು ಮಾಡಲಾಗುತ್ತದೆ” ಎಂದರು.”ಮೈಕ್ರೋ ಫೈನಾನ್ಸ್ ಕುರಿತ ಸುಗ್ರೀವಾಜ್ಞೆ ಸ್ವರೂಪ ಬಗ್ಗೆ ಇನ್ನೆರಡು ಮೂರು ದಿನಗಳಲ್ಲಿ ಅಂತಿಮಗೊಳಿಸಿ ನಂತರ ಸುಗ್ರೀವಾಜ್ಞೆ ಹೊರಡಿಸಲಾಗುತ್ತದೆ.

ಯಾವಾಗ ಸುಗ್ರೀವಾಜ್ಞೆ ಹೊರಡಿಸಬೇಕು ಅಂತ ಸಮಯ ನಿಗದಿಗೊಳಿಸಿಲ್ಲ. ಜನರಿಗೆ ಕಿರುಕುಳ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ, ಆತ್ಮಹತ್ಯೆ, ಊರು ಬಿಡುವ ಘಟನೆಗಳು ಆಗುತ್ತಿವೆ. ಇದು ನಿಲ್ಲಬೇಕು, ನೋಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೂ ಕಡಿವಾಣ ಹಾಕಬೇಕು. ನಮ್ಮ ಊರಿನಲ್ಲಿ ಎರಡೂವರೆ ಲಕ್ಷ ಕೊಟ್ಟು ನಾಲ್ಕೂವರೆ ಲಕ್ಷ ವಸೂಲು ಮಾಡಿದ್ದಾರೆ” ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ