Breaking News

ಪೊಲೀಸ್ ಠಾಣೆ ಮೆಟ್ಟಿಲೇರಿದ ‘ಮಂಗಳಗೌರಿ ಮದುವೆ’ ಧಾರಾವಾಹಿ ನಿರ್ದೇಶಕ

Spread the love

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ಕಿರುತೆರೆಯ ಪ್ರಖ್ಯಾತ ನಿರ್ದೇಶಕ ಕೆ‌.ಎಸ್.ರಾಮ್‌ ಜೀ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಮಾಚಾರಿ’ ಧಾರಾವಾಹಿಯ ನಿರ್ದೇಶಕ ಕೆ.ಎಸ್.ರಾಮ್ ಜೀ ನೀಡಿರುವ ದೂರಿನನ್ವಯ ಬೆಂಗಳೂರು ಪಶ್ಚಿಮ ಸಿಇಎನ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.

ಜನವರಿ 24ರಂದು ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ರಾಮ್ ಜೀ ಫೋಟೋ ಬಳಸಿರುವ ಕಿಡಿಗೇಡಿಗಳು, ಅವರ ವಿರುದ್ಧ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಮಾಡಿದ್ದಾರೆ. ಈ ರೀತಿ ಸುಳ್ಳು ಆರೋಪ ಮಾಡುತ್ತಿರುವ ಖಾತೆ ಸೃಷ್ಟಿಸಿರುವ ಅಪರಿಚಿತನನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವಂತೆ ರಾಮ್ ಜೀ ದೂರಿನಲ್ಲಿ ಒತ್ತಾಯಿಸಿದ್ದಾರೆ.’ರಾಮಾಚಾರಿ’, ‘ಮಂಗಳಗೌರಿ ಮದುವೆ’ ಸೇರಿದಂತೆ ಕೆಲ ಧಾರಾವಾಹಿಗಳ ನಿರ್ದೇಶನ ಮಾಡಿರುವ ರಾಮ್ ಜೀ ಹೆಜ್ಜಾರು ಎಂಬ ಕನ್ನಡ ಸಿನಿಮಾಗೂ ಸಹ ಆ್ಯಕ್ಷನ್, ಕಟ್ ಹೇಳಿದ್ದಾರೆ.


Spread the love

About Laxminews 24x7

Check Also

ಹೊಸಕೋಟೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Spread the loveಹೊಸಕೋಟೆ: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಓರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ