Breaking News

ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತ

Spread the love

ದಾವಣಗೆರೆ: ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಆರನೇ ಮೈಲಿಗ್ಗಲು (ತರಳಬಾಳು ನಗರ) ಗ್ರಾಮದಲ್ಲಿ ತಡರಾತ್ರಿ ನಡೆಯಿತು.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹದಡಿ ಗ್ರಾಮದ ರಾಜು (38) ಮತ್ತು ರಾಮಪ್ಪ (40) ಮೃತರೆಂದು ಗುರುತಿಸಲಾಗಿದೆ. ಮೃತದೇಹಗಳನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಹದಡಿ ಗ್ರಾಮದಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ದಾವಣಗೆರೆ ಕಡೆಯಿಂದ ಚನ್ನಗಿರಿ ಕಡೆ ಸಂಚರಿಸುತ್ತಿದ್ದ ಬಸ್ ಡಿಕ್ಕಿಯಾಗಿ, ಬಳಿಕ ಮನೆಗೆ ನುಗ್ಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಇಡೀ ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಹದಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆಗೆ ತೆರಳುತ್ತಿದ್ದಾಗ ದುರಂತ: ರಾಮಪ್ಪ ಹಾಗು ರಾಜು ಆಪ್ತ ಮಿತ್ರರಾಗಿದ್ದು, ತಮ್ಮದೇ ದ್ವಿಚಕ್ರ ವಾಹನದಲ್ಲಿ ಸಂಬಂಧಿಕರ ಮದುವೆಗೆಂದು ದಾವಣಗೆರೆ ಬರುತ್ತಿದ್ದರು. ಈ ವೇಳೆ ಬಸ್ ಯಮನಂತೆ ಎದುರಾಗಿದ್ದು, ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ