Breaking News

ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು.

Spread the love

ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ

ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು.

ಇದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು; ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದೆ. ದೇಶೀಯ ಉಕ್ಕು ಕ್ಷೇತ್ರಕ್ಕೆ ಶಕ್ತಿ ತುಂಬುವ ದಿಟ್ಟ ಹೆಜ್ಜೆ ಇದಾಗಿದೆ ಎಂದರು.

ನವದೆಹಲಿ ಉಕ್ಕು ಸಚಿವಾಲಯದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಕುಮಾರಸ್ವಾಮಿ ಅವರು, ತಮ್ಮ ಇಲಾಖೆಯ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ ಹಾಗೂ ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮಮೋಹನ್ ನಾಯ್ಡು ಅವರ ಜತೆಗೂಡಿ ವೈಜಾಗ್ ಸ್ಟೀಲ್ ಪ್ಯಾಕೇಜ್ ಅನ್ನು ಘೋಷಣೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗುರುವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಸಭೆಯಲ್ಲಿ ವೈಜಾಗ್ ಸ್ಟೀಲ್ ಪುನಚ್ಚೆತನ ಪ್ಯಾಕೇಜ್ ಗೆ ಅನುಮೋದನೆ ನೀಡಲಾಗಿದೆ ಎಂದು ಉಕ್ಕು ಸಚಿವರು ಹೇಳಿದರು.

ಪ್ರಧಾನಿ ಮೋದಿ ಅವರು ಸಂಕ್ರಾಂತಿ ಹೊತ್ತಿಗೆ ಆಂಧ್ರ ಪ್ರದೇಶ ಜನತೆಗೆ ಶುಭ ಸುದ್ದಿ ಕೊಡುತ್ತೇವೆ ಎಂದು ಹೇಳಿದ್ದರು. ಅದರಂತೆ ವಿಶಾಖಪಟ್ಟಣ ಸ್ಟೀಲ್ ಕಾರ್ಖಾನೆಯ ಪುನಚ್ಚೆತನ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಿಗಳಿಗೆ ಹಾಗೂ ನಮ್ಮ ಪ್ರಯತ್ನಗಳಿಗೆ ಸಂಪೂರ್ಣ ಸಹಕಾರ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿಶೇಷ ಧನ್ಯವಾದ ಸಲ್ಲಿಸುವೆ ಎಂದು ಸಚಿವರು ಹೇಳಿದರು.

ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ:*

ವಿಶಾಖಪಟ್ಟಣ (ಆಂಧ್ರ ಪ್ರದೇಶ): ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿದ್ದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಗೆ ಕೇಂದ್ರ ಸರಕಾರ ₹11,440 ಕೋಟಿ ಮೊತ್ತದ ಬೃಹತ್ ಪುನಚ್ಚೇತನ ಪ್ಯಾಕೇಜ್ ನೀಡಿದ್ದು, ಕಾರ್ಖಾನೆಯನ್ನು ಬಹುತೇಕ ಸಂಕಷ್ಟದಿಂದ ಪಾರು ಮಾಡಲಾಗಿದೆ ಎಂದು ಕೇಂದ್ರದ ಉಕ್ಕು-ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪ್ಯಾಕೇಜ್ ಘೋಷಣೆ ಮಾಡಿದ ನಂತರ ಮೊದಲ ಬಾರಿಗೆ ವೈಜಾಗ್ ಸ್ಟೀಲ್ ಕಾರ್ಖಾನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು; ಕಾರ್ಖಾನೆಯ ಮೂರೂ ಬ್ಲಾಸ್ಟ್ ಪರ್ನೆಸ್ (ಊದು ಕುಲುಮೆ) ಗಳಿಗೆ ಚಾಲನೆ ಕೊಟ್ಟು ಕೆಲವೇ ತಿಂಗಳಲ್ಲಿ ಇಡೀ ಕಾರ್ಖಾನೆ ಪೂರ್ಣ ಪ್ರಮಾಣದಲ್ಲಿ ಉಕ್ಕು ಉತ್ಪಾದನೆಗೆ ಅಗತ್ಯವಾದ ಎಲ್ಲಾ ವ್ಯವಸ್ಥೆ ಮಾಡುತ್ತೇವೆ ಎಂದರು.

ಕಾರ್ಖಾನೆ 35,000 ಕೋಟಿ ಸಾಲ ಹೊಂದಿದ್ದು, ಅದನ್ನು ಗಮನದಲ್ಲಿಟ್ಟುಕೊಂಡು ಉತ್ಪಾದನೆಯ ದಕ್ಷತೆ, ಕ್ಷಮತೆಯನ್ನು ಹೆಚ್ಚಿಸುತ್ತೇವೆ. ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ಹೊಂದಿದ್ದೇವೆ. ಸಾಲವನ್ನು ಹಂತಹಂತವಾಗಿ ಮರು ಪಾವತಿ ಮಾಡುತ್ತೇವೆ ಎಂದು ಅವರು ಹೇಳಿದರು.

ವೈಜಾಗ್ ಸ್ಟೀಲ್ ಕಾರ್ಖಾನೆಗೆ ಈ ಪ್ಯಾಕೇಜ್ ನಲ್ಲಿ ₹10,300 ಕೋಟಿ ಹೂಡಿಕೆ ಮಾಡಲಾಗುವುದು ಹಾಗೂ ₹1,140 ಕೋಟಿಯನ್ನು ಷೇರು ರೂಪದಲ್ಲಿ ನಿರ್ವಹಣಾ ಬಂಡವಾಳವಾಗಿ ತೊಡಗಿಸಲಾಗುವುದು. ಈ ₹1,140 ಕೋಟಿಯನ್ನು ಹತ್ತು ವರ್ಷಗಳವರೆಗೂ ಹಿಂದಕ್ಕೆ ಪಡೆಯಲು ಅವಕಾಶವಿಲ್ಲ ಎಂದರು ಅವರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ